ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಋತುಚಕ್ರದ ತಪ್ಪು ಕಲ್ಪನೆ ಹೋಗಲಾಡಿಸಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಡಿ ಮಹಿಳೆಯರಲ್ಲಿ ಋತುಚಕ್ರದ ಶುಚಿತ್ವದ ಅರಿವು ಸಪ್ತಾಹ
Last Updated 29 ಮೇ 2020, 16:29 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮಹಿಳೆಯರಲ್ಲಿ ಋತು ಚಕ್ರವು ಒಂದು ಸಹಜ ಜೈವಿಕ ಪ್ರಕ್ರಿಯೆ. ಅದಿಲ್ಲದೆ ಮಾನವ ಸಂತತಿ ಮುಂದುವರೆಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು’ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಡಿ ಮಹಿಳೆಯರಲ್ಲಿ ಋತು ಚಕ್ರದ ಶುಚಿತ್ವದ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಋತುಚಕ್ರದ ಶುಚಿತ್ವದಿಂದ ಲೈಂಗಿಕ ಸೋಂಕು ಇತರೆ ಗುಪ್ತರೋಗಗಳಿಂದ ದೂರವಿರಬಹುದು ಎಂಬ ಅರಿವು ನಮ್ಮ ಗ್ರಾಮೀಣ ಜನಸಾಮಾನ್ಯರಲ್ಲಿ ಬರಬೇಕಾಗಿದೆ. ಈ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಾವೆಲ್ಲರೂ ಒಟ್ಟಾಗಿ ಮಾಡಬೇಕಾದ ಅಗತ್ಯವಿದೆ’ ಎಂದರು.

ಚಿಕ್ಕಬಳ್ಳಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ.ಯೋಜನಾ ನಿರ್ದೇಶಕ ಗಿರಿಜಾಶಂಕರ್, ಮುಖ್ಯ ಲೆಕ್ಕಾಧಿಕಾರಿ ಅರ್ಚನಾ ಬಿ.ಕಮಲನಾಭನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT