ಶುಕ್ರವಾರ, ಏಪ್ರಿಲ್ 3, 2020
19 °C

ಚಿಕ್ಕಬಳ್ಳಾಪುರಕ್ಕೆ ಜಿ.ಕೆ. ಮಿಥುನ್ ಕುಮಾರ್ ನೂತನ ಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬುಧವಾರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ನೇಮಕ ಮಾಡಿದೆ.

ಮಿಥುನ್ ಕುಮಾರ್ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾಗಿದ್ದರು.

ಈ ಹಿಂದೆ ಚಿಕ್ಕಬಳ್ಳಾಪುರ ಎಸ್ಪಿ ಆಗಿದ್ದ ಅಭಿನವ್ ಖರೆ ಅವರು ಕೇಂದ್ರ ಸೇವೆಗೆ ನಿಯುಕ್ತರಾಗುವ ಜತೆಗೆ ಸಿಬಿಐ ಎಸ್ಪಿ ಆಗಿಯೂ ನಿಯೋಜನೆಗೊಂಡಿದ್ದರು.

ಇತ್ತೀಚೆಗಷ್ಟೇ ಅಭಿನವ್ ಖರೆ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

2016ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಮಿಥುನ್ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊಂಡನಹಳ್ಳಿಯವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು