ಗುರುವಾರ , ಡಿಸೆಂಬರ್ 2, 2021
19 °C

‘ದೇವರ ಹೆಸರಿನ ಆಸ್ತಿ ಖಾಸಗಿಯವರಿಗಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ನಗರದ ಪ್ರಸಿದ್ಧ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯದ ಆಸ್ತಿಯನ್ನು ಖಾಸಗಿಯವರಿಗೆ ಖಾತೆ ಮಾಡಿಕೊಡಲಾಗಿದೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಆಜಾದ್ ಭಜನಾ ಮಂಡಳಿ ಮತ್ತು ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯ ತಿಳಿಸಿದೆ.

8ನೇ ವಾರ್ಡ್‌ನಲ್ಲಿ ದೇವಾಲಯವಿದೆ. ದೇವಾಲಯದ ಜಾಗವನ್ನು ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ ಬಾಬು ಖಾಸಗಿಯವರಿಗೆ ಖಾತೆ ಬದಲಾವಣೆ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ದೂರು ದಾಖಲು: ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೈರಲ್ ಆಗಿದ್ದು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ರಾಜಕೀಯ ಬೆಳವಣಿಗೆ ಸಹಿಸದೆ ಮತ್ತು ತೇಜೋವಧೆಗಾಗಿ ಈ ರೀತಿಯ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ.

ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.