ಗುರುವಾರ , ಡಿಸೆಂಬರ್ 3, 2020
23 °C

ಮಾಂಗಲ್ಯ ಸರ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ದಾರಿ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಹೋಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವನಿತಾ(27) ಸರ ಕಳೆದು ಕೊಂಡವರು. ಇಡಗೂರು-ಭೀಮನಹಳ್ಳಿ ರಸ್ತೆಯ ಜಮೀನಿನ ಬಳಿ ಮೇಕೆ ಸಾಕಾಣಿಕೆ ಮಾಡುತ್ತಿದ್ದ ಮಾವ ನಾಗಪ್ಪನಿಗೆ ಊಟ ಕೊಟ್ಟು ಹಿಂತಿರುಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಇಡಗೂರಿಗೆ ಹೋಗುವ ದಾರಿ ಯಾವುದು ಎಂದು ಅವರನ್ನು ಕೇಳಿದ್ದಾರೆ.

ಸ್ವಲ್ಪ ದೂರ ಹೋಗಿ ಮತ್ತೆ ಹಿಂತಿರುಗಿ ಬಂದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.  ಸಿಪಿಐ ಎಸ್. ರವಿ, ಪಿಎಸ್‌ಐ ಮೋಹನ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.