ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿಯಲ್ಲಿರುವ ಎಸಿಸಿ ಲಿಮಿಟೆಡ್ ಕಾರ್ಖಾನೆಯ ಘಟಕವನ್ನು ಮತ್ತಷ್ಟು ವಿಸ್ತರಣೆ ಮಾಡುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಕಾರ್ಖಾನೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಿದರು.

ಎಸಿಸಿ ಕಾರ್ಖಾನೆಯಿಂದ ಬರುವ ದೂಳಿನಿಂದ ತೊಂಡೇಬಾವಿ ಸುತ್ತಮುತ್ತಲಿನ ಗ್ರಾಮಗಳ ಜನರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ರೈತರ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ಈಗ ಅದನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿರುವುದು ಈ ಭಾಗದ ಜನರಿಗೆ ಮರಣ ಶಾಸನವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ದಿನೇಶ್ ಕುಮಾರ್ ಮಾತನಾಡಿ, ಕಾರ್ಖಾನೆಯ ದೂಳಿನಿಂದ ಸುತ್ತಮುತ್ತಲಿನ ಜನರಲ್ಲಿ ಅನೇಕ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿವೆ. ಸಿಮೆಂಟ್ ದೂಳಿನ ಕಣಗಳು ಸೇರಿ ಗಿಡ– ಮರಗಳು ಒಣಗುತ್ತಿವೆ. ಕಾರ್ಖಾನೆ ಪಕ್ಕದಲ್ಲಿರುವ ಶಾಲೆಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಲಾರಿಗಳಲ್ಲಿ ನಿಗದಿತ ತೂಕಕ್ಕಿಂತ ಹೆಚ್ಚಿನ ತೂಕವನ್ನು ಹಾಕುತ್ತಿರುವುದರಿಂದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ, ಈಗ ಕಾರ್ಖಾನೆಯನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿರುವುದು ಈ ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ. ಸಂಬಂಧಪಟ್ಟವರು ಕಾರ್ಖಾನೆ ವಿಸ್ತರಣೆ ಮಾಡುವ ಬದಲು, ಸಂಪೂರ್ಣವಾಗಿ ಮುಚ್ಚಿಸಿದರೆ ಅನುಕೂಲವಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಲೋಕೇಶ್ ಗೌಡ ಮಾತನಾಡಿ, ಕಾರ್ಖಾನೆಯು ಜನನಿಬಿಡ ಪ್ರದೇಶಕ್ಕಿಂತ ನಿರ್ದಿಷ್ಟ ದೂರದಲ್ಲಿ ಇರಬೇಕು. ಆದರೆ ಎಸಿಸಿ ಸಿಮೆಂಟ್ ಕಾರ್ಖಾನೆಯು ನಗರಕ್ಕೆ ಹತ್ತಿರದಲ್ಲಿದೆ. ತೊಂಡೇಬಾವಿ ಗ್ರಾಮದ ಜನ ವಾಸಿಸುವ ಜಾಗದಲ್ಲಿರುವುದರಿಂದ, ಇಲ್ಲಿರುವ ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ನಿತ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಈಗ ಕಾರ್ಖಾನೆಯಲ್ಲಿ ಸಿಮೆಂಟ್ ಉತ್ಪಾದನೆಯನ್ನು ಮತ್ತಷ್ಟು ಹೆಚ್ಚು ಮಾಡಲು ಕಾರ್ಖಾನೆ ವಿಸ್ತರಣೆ ಮಾಡುತ್ತಿರುವುದು ಜನರ ಆರೋಗ್ಯ ದೃಷ್ಟಿಯಿಂದ ಕಳವಳಕಾರಿಯಾಗಿದೆ. ಕಾರ್ಖಾನೆ ಆರಂಭವಾದಾಗಿನಿಂದ ರೈತರು ವ್ಯವಸಾಯ ಮಾಡುವುದು ದುಸ್ತರವಾಗಿದೆ. ಸಂಬಂಧಪಟ್ಟವರು ಸಮಿತಿ ರಚನೆ ಮಾಡಿ, ಕಾರ್ಖಾನೆಯನ್ನು ಮುಚ್ಚಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎರಡು ಮೆಟ್ರಿಕ್ ಟನ್ನಿಂದ 8 ಮೆಟ್ರಿಕ್ ಟನ್ಗೆ ಉತ್ಪಾದನೆ ಹೆಚಿಸಿದರೆ, ತೊಂಡೇಬಾವಿ ಸುತ್ತಮುತ್ತಲಿನ ಗ್ರಾಮ ಹಾಗೂ ಅಲೀಪುರ ಪಟ್ಟಣ ಪಂಚಾಯಿತಿಯಲ್ಲಿ ಯಾರು ವಾಸ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕಾರ್ಖಾನೆಯನ್ನು ಮುಚ್ಚಿಸಬೇಕು ಎಂದು ನರೇಂದ್ರ ರೆಡ್ಡಿ ಒತ್ತಾಯಿಸಿದರು.

ಕರವೇ ಪ್ರಭು, ಶ್ರೀಧರ್ ರೆಡ್ಡಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-16-1831713776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.