ಗೌರಿಬಿದನೂರು: ತಾಲ್ಲೂಕಿನ ಡಿ.ಪಾಳ್ಯ, ನಾಮಗೊಂಡ್ಲು, ಕಸಬಾ ಹೋಬಳಿ ಮತ್ತು ಗಂಗಸಂದ್ರ ಗ್ರಾಮ ಪಂಚಾಯಿತಿಗಳಲ್ಲಿ ಆಶ್ರಯ ಯೋಜನೆಯಡಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ನೀಡುವ ವಿಶೇಷ ಗ್ರಾಮಸಭೆ ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಮಾತನಾಡಿ, ಸರ್ಕಾರದಿಂದ ಬಡವರಿಗೆ ಮತ್ತು ನಿವೇಶನವಿಲ್ಲದ ಅರ್ಹ ಫಲಾನುಭವಿಗಳಿಗೆ ಪಾರದರ್ಶಕತೆಯಿಂದ ನಿವೇಶನ ಹಂಚಲಾಗುವುದು. ಇದರಲ್ಲಿ ಯಾವುದೇ ಜಾತಿ, ಧರ್ಮ ರಾಜಕೀಯ ಪಕ್ಷಗಳಿಗೆ ಸೀಮಿತವಾಗದೆ ಪ್ರತಿಯೊಬ್ಬ ನಿವೇಶನ ರಹಿತರ ದಾಖಲೆ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮಾತ್ರವೇ ನಿವೇಶನ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನ ಸಂಖ್ಯೆ ನೀಡಲಾಯಿತು.

ಈ ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಮತ್ತು ಅಧಿಕಾರಿಗಳ ನಡುವೆ ಗೊಂದಲ ಉಂಟಾಯಿತು. ಈ ಕುರಿತು ಮಾತನಾಡಿದ ಸ್ಥಳೀಯ ಖಾದರ್ ಸುಬಾನ್ ಖಾನ್, ನಿವೇಶನ ರಹಿತರು ಅರ್ಜಿ ಸಲ್ಲಿಸಲು ಎರಡು ಸಾವಿರ ಹಣ ಖರ್ಚಾಗಿದೆ. ನಿವೇಶನ ನೀಡಲು ಆಶ್ರಯ ಸಮಿತಿಯಲ್ಲಿ ತೀರ್ಮಾನ ಮಾಡದೆ ಏಕಾಏಕಿ ಲಾಟರಿ ಮೂಲಕ 25 ಜನರನ್ನು ಮಾತ್ರ ಆಯ್ಕೆ ಮಾಡಿದ್ದಾರೆ. ಅಧಿಕಾರಿಗಳು ತಾಲ್ಲೂಕಿನ ನಿವೇಶನಗಳಿಗಾಗಿ ಆಯ್ಕೆ ಮಾಡಿರುವ 170 ಎಕರೆ ಜಮೀನಿನ ಸರ್ವೆ ನಂಬರ್ ಬಹಿರಂಗಪಡಿಸಲಿ. ನಿವೇಶನ ನೀಡಲು ಡಿ.ಪಾಳ್ಯ ಗ್ರಾಮದಲ್ಲಿ ಪ್ರಚಾರ ಮಾಡಿ, ಬಚ್ಚರೆಡ್ಡಿಹಳ್ಳಿಯಲ್ಲಿ ನಿವೇಶನ ನೀಡಲು ಮುಂದಾಗಿದ್ದಾರೆ. ಈ ಗ್ರಾಮದಲ್ಲಿ 2017ರಲ್ಲೇ ನಿವೇಶನ ಮಾಡಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ ಹೊನ್ನಯ್ಯ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಾಲಕೃಷ್ಣ, ಪಿಡಿಒ ನಾಗೇಂದ್ರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-1032465707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.