ಗೌರಿಬಿದನೂರು: ನಗರದ ಮುನೇಶ್ವರ ಬಡಾವಣೆಯಲ್ಲಿರುವ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೇಣಿಕ್ ಮಾತನಾಡಿ, ಕಣ್ಣು ಮನುಷ್ಯನಲ್ಲಿರುವ ಪ್ರಮುಖವಾದ ಅಂಗ. ಕಣ್ಣಿನ ದೃಷ್ಟಿ ಕಳೆದುಕೊಂಡರೆ ಅವರ ಜೀವನ ಪರ್ಯಂತ ಕತ್ತಲಲ್ಲಿ ಕಳೆಯಬೇಕಾದ ಪರಿಸ್ಥಿತಿ ಬರುತ್ತದೆ. ಜನರು ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಸದಸ್ಯ ನಂಜೇಗೌಡ ಮಾತನಾಡಿ, ಬಡ ಜನರ ಕಣ್ಣಿನ ಆರೋಗ್ಯವನ್ನು ತಪಾಸಣೆ ಮಾಡಲು ಸ್ಥಳೀಯ ಲಯನ್ಸ್ ಸಂಸ್ಥೆ ದಾನಿಗಳ ನೆರವಿನಿಂದ ಕಣ್ಣಿನ ತಪಾಸಣಾ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದನ್ನು ಸಾರ್ವಜನಿಕರು ಉಪಯೋಗಿಸಿಕೊಂಡು ತಮ್ಮ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.

ಶಿಬಿರದಲ್ಲಿ 93 ಮಂದಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. 36 ಜನರಲ್ಲಿ ಕಣ್ಣಿನ ದೃಷ್ಟಿ ದೋಷ ಕಂಡು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗುತ್ತದೆ. ಇಸ್ತೂರಿ ಸತೀಶ್ ಕುಮಾರ್, ಸುರಾಜ್, ದಸ್ತಗಿರಿಸಾಬ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-16-900447510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.