ಗೌರಿಬಿದನೂರು: ನಗರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಬುಧವಾರ ಭೂಮಿಪೂಜೆ ನೆರವೇರಿಸಿದರು.

ನಗರದ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿ ಶಿಥಿಲವಾದ ಎರಡು ನೀರಿನ ಟ್ಯಾಂಕ್ಗಳನ್ನು ಕೆಡವಿ ನಗರೋತ್ಥಾನ ಯೋಜನೆಯಡಿ ಸುಮಾರು ₹2.90 ಕೋಟಿ ವೆಚ್ಚದಲ್ಲಿ ಹೊಸ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಗರಸಭೆ ಕಚೇರಿ ಹಿಂಭಾಗದಲ್ಲಿ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.

ಎರಡು ಹೊಸ ಟ್ಯಾಂಕ್ಗಳನ್ನು ನೂತನ ತಂತ್ರಜ್ಞಾನದೊಂದಿಗೆ ಕಟ್ಟಲಾಗುವುದು. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ನೀರು ನಗರಕ್ಕೆ ಬಂದಾಗ ಆ ನೀರನ್ನು ಸಂಗ್ರಹಿಸಿ ಪ್ರತಿ ಮನೆಗಳಿಗೆ ಸಮರ್ಪಕವಾಗಿ ವಿತರಿಸಲು 5 ರಿಂದ 10 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ಗಳು ನಗರಕ್ಕೆ ಅವಶ್ಯಕವಾಗಿವೆ ಎಂದರು.

ನಗರಸಭೆ ಮಾಜಿ ಸದಸ್ಯ ಶ್ರೀಕಾಂತ್, ಶ್ರೀರಾಮಯ್ಯ, ಮುಖಂಡ ಬೈಪಾಸ್ ನಾಗರಾಜು, ಅಬೂಬೇಕರ್, ಜಗ್ಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-1366522659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.