ಗೌರಿಬಿದನೂರು: ನಗರದ ಡಾ.ಎಚ್.ಎನ್. ಕಲಾ ಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಮತ್ತು ಡಾ.ಎಚ್.ಎನ್. ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ನಾಟಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಹೆಚ್ಚುವರಿ ಆಯುಕ್ತ ಮುದುಗೆರೆ ನಾಗರಾಜಪ್ಪ ಮಾತನಾಡಿ, ಗೌರಿಬಿದನೂರು ಒಂದು ಕಾಲದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ತವರೂರಿನಂತಿತ್ತು. ಕಾಲಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕುಂಠಿತಗೊಂಡವು ಎಂದು ಬೇಸರ ವ್ಯಕ್ತಪಡಿಸಿದರು.

ಇಡಗೂರಿನ ಗೌತಮ ಬುದ್ಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ, ವೈಚಕೂರಹಳ್ಳಿಯ ಅಮಾಸ ಸಾಂಸ್ಕೃತಿಕ ಕೇಂದ್ರ, ಗೊಟ್ಲಗುಂಟೆಯ ಗ್ರಾಮೀಣ ಯುವಕಲಾ ಸಂಘದಂತಹ ಕೆಲ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಅವರನ್ನು ಹೊರತುಪಡಿಸಿ, ಬೇರೆಯವರು ಕಾರ್ಯಕ್ರಮಗಳನ್ನು ನಡೆಸುತ್ತಿಲ್ಲ. ಡಾ.ಎಚ್. ಎನ್ ಪ್ರಾಧಿಕಾರವು ತಾಲ್ಲೂಕಿನಲ್ಲಿ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದೆ ಎಂದು ಹೇಳಿದರು.

ಕಲ್ಯಾಣದ ಕೂಗು ಮತ್ತು ಸಂಸಾರದಲ್ಲಿ ಸನಿದಪ’ ನಾಟಕಗಳು ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡವು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲೆ ಸಿ. ನಾಗರತ್ನಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎನ್. ಪ್ರಕಾಶರೆಡ್ಡಿ, ಕೆ.ವಿ. ನಾಯಕ, ಉಮಾಶಂಕರ್, ಸಂಕಲ್ಪ ವೀರಣ್ಣ, ವೆಂಕಟೇಶ್, ಮಲ್ಲಿಕಾರ್ಜುನ ಸ್ವಾಮಿ, ಶ್ವೇತಾ ಪ್ರೇಮತ್, ಅಂಬಿ, ವೈ.ಟಿ. ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-1380014539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.