ಗೌರಿಬಿದನೂರು: ತಾಲ್ಲೂಕಿನ ಕೋಟಾಲದಿನ್ನೆಯಲ್ಲಿನ ವಿವಿಧ ಬೇಕರಿಗಳಿಗೆ ಆಹಾರ ಸುರಕ್ಷತಾ ಅಧಿಕಾರಿ ಡಾ. ಹೇಮಾ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಹೊಸ ವರ್ಷದ ಪ್ರಯುಕ್ತ ಬೇಕರಿಗಳಲ್ಲಿ ತಯಾರು ಮಾಡುತ್ತಿರುವ ಕೇಕ್, ಸಿಹಿ ತಿನಿಸುಗಳು ಸೇರಿದಂತೆ ವಿವಿಧ ಪದಾರ್ಥಗಳ ಗುಣಮಟ್ಟ ಮತ್ತು ಸ್ವಚ್ಛತೆ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಕೆಲವು ಬೇಕರಿಗಳಲ್ಲಿನ ತಿನಿಸುಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಎಫ್ಎಸ್ಎಸ್ಐ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ ಎಂದರು.

ಬೇಕರಿ ಮಾಲೀಕರಿಗೆ ಸ್ವಚ್ಛತೆ ಮತ್ತು ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ, ಆರೋಗ್ಯ ನಿರೀಕ್ಷಣಾಧಿಕಾರಿ ನಂದೀಶ್ ಮತ್ತು ರಾಜೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.