ಗೌರಿಬಿದನೂರು: ನಗರದ ಸರ್ಕಾರಿ ಕೋಟೆ ಪ್ರೌಢಶಾಲೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.

1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಜಿಲ್ಲೆಯ ಅತೀ ದೊಡ್ಡ ಶಾಲೆ ಎಂಬ ಕೀರ್ತಿಗೆ ಭಾಜನವಾದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಬೋಧನೆ ಮಾಡಿದರು.

ವಿದ್ಯಾರ್ಥಿಗಳಿಗೆ ಪಾಠ ಮಾಡುವ ಜೊತೆಗೆ ಶಿಕ್ಷಕರ ಹಾಜರಾತಿ, ಪರಿಶೀಲನೆ, ಸ್ವಚ್ಛತೆ, ವಿದ್ಯಾರ್ಥಿಗಳ ಸಮಸ್ಯೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಹತ್ತನೇ ತರಗತಿಯಲ್ಲಿ ಓದುತ್ತಿರುವ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ಪ್ರಾರಂಭದಿಂದಲೇ
ಪಾಠ ಪ್ರವಚನಗಳ ಕಡೆ ಹೆಚ್ಚಿನ ಗಮನ ನೀಡುವ ಅಭ್ಯಾಸ ಮಾಡಬೇಕು ಎಂದು ತಿಳಿಹೇಳಿದರು.

ಇದರಿಂದ ಉತ್ತಮ ಫಲಿತಾಂಶ ಪಡೆಯಬಹುದು ಎಂದು ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದರು. ಪೋಷಕರಿಲ್ಲದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಕ್ಕಳಿಂದಲೇ ಮಾಹಿತಿ ಪಡೆದು, ಅವರ ಶೈಕ್ಷಣಿಕ ಅಭಿವೃದ್ಧಿಗೆ ಕಾಳಜಿ ವಹಿಸುವಂತೆ ಶಿಕ್ಷಕರಿಗೆ ತಿಳಿಸಿದರು. ಜೊತೆಗೆ ಮೌಲ್ಯಯುತ ಫಲಿತಾಂಶ ಹೆಚ್ಚಿಸಲು ಶಿಕ್ಷಕರಿಗೆ ಸಲಹೆ–ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.