ಗೌರಿಬಿದನೂರು: ತಾಲ್ಲೂಕಿನ ಹೊಸೂರಿನಲ್ಲಿರುವ ಡಾ.ಎಚ್.ಎನ್.ನ್ಯಾಷನಲ್ ಹೈ ಸ್ಕೂಲ್‌ನಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿತು.
ಶಾಲೆಯ ಆರು ಎಸ್.ಸಿ., ಎಸ್.ಟಿ ವಿದ್ಯಾರ್ಥಿನಿಯರಿಗೆ ವಿದ್ಯಾಜ್ಯೋತಿ ಡಾ.ಬಿ.ಆರ್.ಅಂಬೇಡ್ಕರ್ ಯೋಜನೆಯಡಿಯಲ್ಲಿ ವಿದ್ಯಾರ್ಥಿನಿ ವೇತನವನ್ನು ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸುಗನ್ಯ ವಿತರಿಸಿದರು.
ಪ್ರತಿ ವರ್ಷ ಸ್ವಾತಂತ್ರ್ಯ ದಿನದಂದು ಕೆನರಾ ಬ್ಯಾಂಕ್ ಎಲ್ಲಾ ಶಾಖೆಗಳಲ್ಲಿ 6–10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡಕ್ಕೆ ಸೇರಿದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ತಲಾ ₹5,000 ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕರಾದ ಕೆ.ನಾಗರಾಜ್, ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದಪ್ಪ, ಎಚ್.ವಿ. ವೆಂಕಟೇಶ, ನಾಗಭೂಷಣಗುಪ್ತ, ಹಿರಿಯ ವಿದ್ಯಾರ್ಥಿ ನರಸಿಂಹಮೂರ್ತಿ, ನಾಗರಾಜ್ ಉಪಸ್ಥಿತರಿದ್ದರು.