ಚಿಂತಾಮಣಿ: ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಮಿತಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸರ್ಕಾರಿ ನೌಕರರ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಹೊರಟ ನೌಕರರ ಬಸ್‌ಗಳಿಗೆ ಚಾಲನೆ ನೀಡಲಾಯಿತು.

ಈ ವೇಳೆ ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರೆಡ್ಡಿ ಮಾತನಾಡಿ, ಸಮ್ಮೇಳನದಲ್ಲಿ ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನೌಕರರನ್ನು ಕರೆದೊಯ್ಯಲು 12 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದಲ್ಲಿ ಪ್ರಮುಖ ಮೂರು ಬೇಡಿಕೆಗಳಾದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ಸರ್ಕಾರ ನೂತನವಾಗಿ ಜಾರಿಗೊಳಿಸಿರುವ ಎನ್‌ಪಿಎಸ್ ಅನ್ನು ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸಬೇಕು. ನೌಕರರಿಗೆ ನಗದು ರಹಿತ ಚಿಕಿತ್ಸೆಯ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಡ ಹೇರಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪೌರಾಯುಕ್ತ ಜಿ.ಎನ್.ಚಲಪತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರವಣಪ್ಪ, ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ ರೆಡ್ಡಿ, ನೌಕರರ ವಿವಿಧ ವೃಂದಗಳ ಪದಾಧಿಕಾರಿಗಳು ಹಾಗೂ ನೌಕರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.