ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಶಾಂತಿಯುತವಾಗಿ ಮತದಾನ ಆರಂಭ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಆರಂಭಗೊಂಡಿದೆ.

ಮತದಾನಕ್ಕಾಗಿ ಜಿಲ್ಲೆಯಲ್ಲಿ 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಚುನಾವಣೆಯಲ್ಲಿ 16,205 ಪದವೀಧರ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಜಿಲ್ಲಾಡಳಿತವು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕೋವಿಡ್ ಕಾರಣಕ್ಕೆ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತಗಟ್ಟೆಗೆ ಬರಬೇಕೆಂದು ಸೂಚಿಸಲಾಗಿದೆ. ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.