ಶಿಡ್ಲಘಟ್ಟ: ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಶ್ವಿನಿ ಎನ್, ಉಪಾಧ್ಯಕ್ಷರಾಗಿ ಬಿ.ಆರ್.ಮಂಜುನಾಥ್ ಆಯ್ಕೆಯಾಗಿದ್ದಾರೆ.

ಒಟ್ಟು 10 ಸದಸ್ಯರ ಬಲ ಹೊಂದಿರುವ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷಸ್ಥಾನ ಬಿಸಿಎಂಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು ನಿಗದಿಪಡಿಸಲಾಗಿದ್ದು ಮಂಗಳವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಗ್ರಾ.ಪಂ ಸದಸ್ಯರಾದ ಜೆ.ಸೌಮ್ಯ, ಕೆ.ಅಂಬಿಕ, ಬಿ.ವಿ.ಸೋಮಶೇಖರ್, ಎಂ.ಮಂಜುನಾಥ್, ಎನ್.ಮಂಜುನಾಥ್, ಜೆ.ಸುಷ್ಮ, ನಾರಾಯಣಸ್ವಾಮಿ, ಸ್ವಾತಿ ಗ್ರಾಮದ ಮುಖಂಡರಾದ ಜಿ.ಬಿ.ನಾರಾಯಣಸ್ವಾಮಿ, ಮುತ್ತೂರು ಕೇಶವಮೂರ್ತಿ, ಆನಮದಕುಮಾರ್, ರವಿ, ಪಿಡಿಓ ಅಂಜನ್ಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.