ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನುದಾನ: ಡಾ.ವಿ.ವೆಂಕಟೇಶ್

Published 11 ಮೇ 2024, 13:24 IST
Last Updated 11 ಮೇ 2024, 13:24 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಅವರ ಆಸಕ್ತಿಯಿಂದಾಗಿ ಮೂರು ಕೋಟಿ ರೂಪಾಯಿ ಅನುದಾನ ಬಂದಿದೆ’ ಎಂದು ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು.

ಕಾಲೇಜಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನ್ಯಾಕ್ ಬಿ ಶ್ರೇಣಿ ಪ್ರಮಾಣ ಪತ್ರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಪಿಎಂ ಉಷಾ ಅನುದಾನದಡಿ ಐದು ಕೋಟಿ ಅನುದಾನವೂ ಲಭಿಸಲಿದೆ. ಕಾಲೇಜನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಹೇಳಿದರು.

‘ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 500 ಇದ್ದು, ಸಂಖ್ಯೆ ದ್ವಿಗುಣಗೊಳ್ಳಬೇಕು ಎಂಬುದು ಆಶಯವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿ.ಸಿ.ಎ ಸೇರಿದಂತೆ ಎಲ್ಲ ಪದವಿ ವಿಭಾಗಗಳು ಹಾಗೂ ಎಂ.ಕಾಂ ಕೂಡ ಇದೆ. ಅತ್ಯುತ್ತಮ ಗ್ರಂಥಾಲಯ, ಪ್ರಯೋಗಾಲಯ, ರಂಗಮಂದಿರ, ಕಂಪ್ಯೂಟರ್ ಲ್ಯಾಬ್, ಉಪಾಹಾರಗೃಹ ಇದೆ. ಮುಂದಿನ ದಿನಗಳಲ್ಲಿ ವಿವಿಧ ರೀತಿಯ ನವೀಕರಣ ನಡೆಸಲಿದ್ದು, ಕೊಠಡಿ, ಕಾಂಪೌಂಡ್, ಇ ಲೈಬ್ರರಿ, ಶೌಚಾಲಯ, ನೆಲಹಾಸು ಮುಂತಾದ ಉನ್ನತೀಕರಣದ ಕಾಮಗಾರಿ ನಡೆಯಲಿವೆ. ಕೇಂದ್ರದ ಅನುದಾನ ಬಂದಾಗ ಸ್ನಾತಕೋತ್ತರ ಕೇಂದ್ರ ನಿರ್ಮಿಸಲಾಗುವುದು’ ಎಂದು ಹೇಳಿದರು.

‘ನುರಿತ ಬೋಧಕ ಸಿಬ್ಬಂದಿ, ಐ.ಸಿ.ಟಿ (ಡಿಜಿಟಲ್) ತರಗತಿ, ಎನ್‌ಎಸ್‌ಎಸ್, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರ ಕಾಲೇಜಿನ ವಿಶೇಷತೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT