ಗುಡಿಬಂಡೆ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯು ಬುಧವಾರ ಹಮ್ಮಿಕೊಳ್ಳಲಾಯಿತು.

ಸಭೆ ಉದ್ದೇಶಿಸಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ‘ತಾಲ್ಲೂಕಿನ ವಿವಿಧೆಡೆ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಮೀನುಗಳಿಗೆ ಅಳವಡಿಸಿದ ಕಾಂಪೌಂಡ್ ಅನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಸಿಗ್ಬತ್ವುಲ್ಲಾ ಅವರಿಗೆ ಸೂಚಿಸಿದರು.

ತಾಲ್ಲೂಕಿನಲ್ಲಿ ಕೆಲವರು 10 ಎಕರೆಗೂ ಮೀರಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿಕೊಂಡಿದ್ದಾರೆ. ಸರ್ವೇ ಮಾಡಿಸಿ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಬೇಕು. ಕೆಲವು ರಿಯಲ್ ಎಸ್ಟೇಟ್ ಮಾಲೀಕರು ಬಡವರಿಂದ ಕಡಿಮೆ ಬೆಲೆಗೆ ಜಮೀನುಗಳನ್ನು ಖರೀದಿಸಿ, ಅದೇ ಜಮೀನನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳ ಮಾಹಿತಿಯನ್ನು ತ್ವರಿತವಾಗಿ ಸಲ್ಲಿಸಬೇಕು ಎಂದು ಸೂಚಿಸಿದರು.

ಸೋಮೇನಹಳ್ಳಿ, ಗಂಗಾನಹಳ್ಳಿಯಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗೆ ಅಳವಡಿಸಿದ 24 ಗಂಟೆ ವಿದ್ಯುತ್ ಟ್ರಾನ್ಸ್ಫಾರ್ಮರ್ನಿಂದ ವಿದ್ಯುತ್ ಪಡೆಯುತ್ತಿರುವ ಬಗ್ಗೆ ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಶಾಸಕ ಪ್ರಶ್ನಿಸಿದರು. ಅಲ್ಲದೆ, ಈ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದೂ ಸೂಚಿಸಿದರು.

ಕಾಟೇನಹಳ್ಳಿಯಲ್ಲಿ ನಿವೇಶನಗಳಿಗೆ ಮೀಸಲಿಟ್ಟ ಜಾಗದಲ್ಲಿ ಆಟದ ಮೈದಾನ ನಿರ್ಮಿಸಬೇಕು ಎಂದು ಕೆಲವು ರಾಜಕೀಯ ಮುಖಂಡರು ಮನವಿ ಮಾಡಿದ್ದು, ಆಟದ ಮೈದಾನದ ಅವಶ್ಯಕತೆಯಿಲ್ಲ. ಬಡವರಿಗೆ ನಿವೇಶನ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ಇದಕ್ಕೆ ಉತ್ತರಿಸಿದ ತಾಲ್ಲೂಕು ಪಂಚಾಯಿತಿ ಇಒ ನಾಗಮಣಿ, ಈಗಾಗಲೇ ತಾಲ್ಲೂಕಿನಲ್ಲಿ 750 ನಿವೇಶನಗಳ ಪೈಕಿ 625 ನಿವೇಶನಗಳು ಹಂಚಿಕೆಗೆ ಸಿದ್ಧವಾಗಿವೆ. ಉಳಿದ 125 ನಿವೇಶನಗಳನ್ನು ಶೀಘ್ರದಲ್ಲಿ ದುರಸ್ತಿ ಮಾಡಲಾಗುವುದು ಎಂದರು.

ಅನೇಕ ಗ್ರಾಮಗಳಲ್ಲಿ ಚರಂಡಿಗಳ ಸ್ವಚ್ಛತೆ ಬಗ್ಗೆ ದೂರುಗಳು ಬಂದಿದ್ದು, ಕೂಡಲೇ ಪರಿಶೀಲಿಸಿ ಚರಂಡಿಗಳನ್ನು ಸರಿಪಡಿಸಬೇಕು ಎಂದು ಶಾಸಕ ತಿಳಿಸಿದರು.

ಸಭೆಯಲ್ಲಿ ಶಾಸಕ ಹಲವು ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಮಾಡಿದರು. ಪಟ್ಟಣದ ಅಮಾನಿಬೈರಸಾಗರ ಕೆರೆ ಕೋಡಿಯಲ್ಲಿ ಬ್ರಿಡ್ಜ್ ನಿರ್ಮಾಣಕ್ಕೆ ₹10 ಕೋಟಿ ಹಾಗೂ ಅಮೃತ್ ಯೋಜನೆಯಡಿ ಪ್ರತಿ ಮನೆಗೆ ನೀರು ಪೂರೈಸಲು ₹15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ಭೂಮಿ ಪೂಜೆ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ಕೆಡಿಪಿ ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರಾದ ರಿಯಾಜ್ಪಾಷಾ, ಬೈರಾರೆಡ್ಡಿ, ಲಕ್ಷ್ಮೀನಾರಾಯಣ, ಗಂಗರಾಜು, ಗುರುಮೂರ್ತಿ, ಇಂದಿರಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.