ಗುಡಿಬಂಡೆ: ತಾಲ್ಲೂಕಿನ ಬಿಚಗಾನಹಳ್ಳಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಶನಿವಾರ ಮಕ್ಕಳ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಪಿಡಿಒ ಲೋಕೇಶ್ ಮಾತನಾಡಿ, ‘ರಜಾ ಅವಧಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ, ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಪ್ರೋತ್ಸಾಹಿಸುವ ರಚನಾತ್ಮಕ ಕಾರ್ಯಕ್ರಮವಾಗಿದೆ’ ಎಂದು ಹೇಳಿದರು.

ಶಿಕ್ಷಕ ಗೋಪಾಲಕೃಷ್ಣ ಸಿಂಗ್ ಮಾತನಾಡಿ, 15 ದಿನ ನಡೆಯುವ ಈ ಶಿಬಿರವು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ನಡೆಯುತ್ತದೆ. ಈ ವೇಳೆ ಕಲಿಕೆಗೆ ಹೆಚ್ಚು ಒತ್ತು ನೀಡುವ ಜತೆಗೆ ಗ್ರಾಮೀಣ ಕ್ರೀಡೆ, ವಿವಿಧ ಆಟಿಕೆಗಳನ್ನು ಆಡಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎನ್. ಗೋಪಾಲ ಕೃಷ್ಣಸಿಂಗ್, ತಾಲ್ಲೂಕು ಐಇಸಿ ಸಂಯೋಜಕ ರಾಮಂಜಿ, ಗ್ರಂಥಪಾಲಕ ನಾರಾಯಣಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-16-456240428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.