ಗುಡಿಬಂಡೆ: ತಾಲ್ಲೂಕಿನ ಗವಿಕುಂಟಹಳ್ಳಿ ದಪ್ಪರ್ತಿ ಕ್ರಾಸ್ನಲ್ಲಿ ರಸ್ತೆ ಉಬ್ಬು ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮರಕ್ಕೆ ಡಿಕ್ಕಿ ಮೃತಪಟ್ಟಿದ್ದಾರೆ.

ಗವಿಕುಂಟಹಳ್ಳಿ ಗ್ರಾಮದ ನವೀನ್ ಕುಮಾರ್ (25) ಮೃತರು.

ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ವ್ಯಾಪ್ತಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ನವೀನ್ ಎಂದಿನಂತೆ ಮನೆಯಿಂದ ಕೆಲಸಕ್ಕೆ ಬೈಕ್ನಲ್ಲಿ ಹೊರಟಿದ್ದರು. ದಪ್ಪರ್ತಿ ಕ್ರಾಸ್ ಬಳಿ ಹಂಪ್ಸ್ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ನವೀನ್ ಕುಮಾರ್ ತಲೆಗೆ ಮತ್ತು ಕಾಲಿಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನಿಸಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

ನವೀನ್ ಕುಮಾರ್ ತಂದೆ–ತಾಯಿಗೆ ಒಬ್ಬನೇ ಮಗನಾಗಿದ್ದು, ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-65395586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.