ಗುಡಿಬಂಡೆ: ಸಂಸತ್ತಿನ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ಕಾಂಗ್ರೆಸ್ ಸೇರಿದಂತೆ ಮಿತ್ರ ಪಕ್ಷಗಳು ಮತ ಚಲಾಯಿಸಿವೆ ಎಂದು ಆರೋಪಿಸಿ ಬಿಜೆಪಿ ತಾಲ್ಲೂಕು ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿವಿಧ ಭಾಗಗಳಿಂದ ಬಂದಿದ್ದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಟ್ಟಣದ ಅಂಬೇಡ್ಕರ್ ಪುತ್ಥಳಿ ಬಳಿಯಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿ ತಲುಪಿದರು. ಮುಖ್ಯರಸ್ತೆ ತಡೆ ಮಾಡಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ.ಎ. ಅಮರೇಶ್ ಮಾತನಾಡಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಮುಂದಾಗಿತ್ತು. ಆದರೆ, ಈ ಮಸೂದೆಗೆ ವಿರೋಧ ಪಕ್ಷಗಳು ಸಹಕಾರ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಗಜನಾಣ್ಯ ನಾಗರಾಜು ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ತಾನು ದಲಿತರು ಮತ್ತು ಮಹಿಳೆಯರ ಪರ ಎಂದು ಹೇಳಿಕೊಳ್ಳುತ್ತದೆ. ಆದರೆ, ಕೇಂದ್ರ ಸರ್ಕಾರ ಮಂಡನೆ ಮಾಡಿದ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ವಿರೋಧ ಮಾಡಿದ್ದು ಯಾಕೆ. ಕಾಂಗ್ರೆಸ್ನ ನಿಜ ಸ್ವರೂಪವು ಇದೀಗ ಜನಸಾಮಾನ್ಯರಿಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗರೆಡ್ಡಿ, ಮದನ ಮೋಹನರೆಡ್ಡಿ, ಆಶಾ ಜಯಪ್ಪ, ಮಂಜುಳಾ ಸಿಂಗ್, ಅರುಣ, ಜ್ಯೋತಿ, ನರಸಿಂಹಮೂರ್ತಿ, ಗಗನ, ಗಜೇಂದ್ರ, ಬೀಚಗಾನಹಳ್ಳಿ ಸುರೇಶ್, ಬೀಚಗಾನಹಳ್ಳಿ ನರಸಿಂಹಮೂರ್ತಿ, ಪ್ರೆಸ್ ಶಿವಪ್ಪ, ಪದ್ಮಾವತಿ, ಈಶ್ವರ್ ರೆಡ್ಡಿ, ವಿಜಯ ರಾಘವರೆಡ್ಡಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-16-233835101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.