ಬುಧವಾರ, ಆಗಸ್ಟ್ 12, 2020
26 °C

ಗುಡಿಬಂಡೆ ತಾಲ್ಲೂಕಿನಲ್ಲಿ ಕಾಣಿಸಿಕೊಂಡ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಡಿಬಂಡೆ: ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲದ ಗ್ರೀನ್ ಜೋನ್‌ನಲ್ಲಿದ್ದ ಗುಡಿಬಂಡೆ ತಾಲ್ಲೂಕಿನಲ್ಲಿ 62 ವರ್ಷದ ವ್ಯಕ್ತಿಗೆ ಕೊರೊನಾ ದೃಢವಾಗಿದೆ.

ತಾಲ್ಲೂಕಿನ ಸೋಮೇನಹಳ್ಳಿಯ ವ್ಯಕ್ತಿಯಾಗಿದ್ದಾರೆ. ಇವರು ಬೆಂಗಳೂರಿಗೆ ಹೋಗಿ ಬಂದ ಹಿನ್ನೆಲೆಯಲ್ಲಿ ಸೋಂಕು ತಗುಲಿರಬಹುದೆಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ಸೋಂಕಿತರಿಗೆ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲುಸ್ರಾವ ಪರೀಕ್ಷೆ ನಡೆಸಿದ್ದು, ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತರ ಮನೆಯ ಸುತ್ತಮುತ್ತ 100 ಮೀಟರ್ ಸೀಲ್‌ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದಿರುವ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಹಶೀಲ್ದಾರ್ ಹನುಮಂತರಾಯಪ್ಪ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.