ಗುಡಿಬಂಡೆ: ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಹಂಪಸಂದ್ರ ಗ್ರಾಮದಲ್ಲಿ ಪೊಲೀಸ್ ಮಾದರಿ ಗ್ರಾಮ ಮತ್ತು ಮನೆ–ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡಿ, ‘ಸಮುದಾಯ ಪೊಲೀಸ್ ವ್ಯವಸ್ಥೆಗೆ ಬಲ, ಅಪರಾಧ ತಡೆಗಟ್ಟುವಿಕೆಯಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಉತ್ತೇಸುವುದು ಮತ್ತು ಹಳ್ಳಿಗಳಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸುವ ಗುರಿಯೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮನೆ–ಮನೆಗೆ ಪೊಲೀಸ್ ಹಾಗೂ ಮಾದರಿ ಗ್ರಾಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಮೋಟಾರು ವಾಹನ ಸುರಕ್ಷತೆ, 112 ಸಹಾಯವಾಣಿ, ಮಕ್ಕಳ ಸುರಕ್ಷತೆ ಬಗ್ಗೆ ಹಾಗೂ ಮನೆ–ಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರೆಡ್ಡಿ, ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಪೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಗುಡಿಬಂಡೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಮುನಿಕೃಷ್ಣ ಮಾತನಾಡಿದರು.

ಹಂಪಸಂದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣ ಮಾತನಾಡಿ, ಕಳೆದ 20 ವರ್ಷಗಳಿಗೆ ಹೋಲಿಕೆ ಮಾಡಿದರೆ, ಹಂಪಸಂದ್ರ ಗ್ರಾಮದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದರು.

ಈ ವೇಳೆ ಡಿವೈಎಸ್ಪಿ ಶಿವಕುಮಾರ್, ಡಾ. ವೆಂಕಟೇಶ್, ಗಣೇಶ್, ರಮೇಶ್, ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಉಪಾಧ್ಯಕ್ಷೆ ಮುದ್ದುಗೌರಮ್ಮ, ಶಿವರಾಂ, ನಾಗರಾಜ್, ಪಿಡಿಒ ಶ್ರೀನಿವಾಸ್, ಅಮರನಾಥಬಾಬು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ವಿವಿಧ ಗ್ರಾಮಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಸೈಬರ್ ಅಪರಾಧ: ಎಚ್ಚರ ವಹಿಸಿ ಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಸೈಬರ್ ದಾಳಿಕೋರರಿಂದ ಬೆದರಿಕೆ ಕರೆಗಳು ಬರುತ್ತವೆ. ಎಪಿಕೆ ಫೈಲ್ಗಳನ್ನು ಯಾವುದೇ ಕಾರಣಕ್ಕೂ ಡೌನ್ನಲೋಡ್ ಮಾಡಬಾರದು. ಒಂದು ವೇಳೆ ಸಮಸ್ಯೆಯಾದರೆ ತಕ್ಷಣವೇ ಸೈಬರ್ ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಬೇಕು. ಕುಶಾಲ್ ಚೌಕ್ಸೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.