ಗುಡಿಬಂಡೆ: ಗುಡಿಬಂಡೆಯನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಲು ಆಗ್ರಹಿಸಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಹೋರಾಟ ಸಮಿತಿ ಮುಖಂಡ ಬಿ.ಎ ಅಮಿರ್ ಜಾನ್ ಮಾತನಾಡಿ, ‘ಗುಡಿಬಂಡೆ ತಾಲ್ಲೂಕು ಅನೇಕ ವರ್ಷಗಳಿಂದ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದೇವೆ. ಈಗಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ತಾಲ್ಲೂಕುಗಳು ಒಳಪಟ್ಟಿವೆ. ರಾಜ್ಯದ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಮೂರು ತಾಲ್ಲೂಕುಗಳನ್ನು ಒಳಗೊಂಡಿಲ್ಲ. ತಾಲ್ಲೂಕು ನ್ಯಾಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲ ಗ್ರಾಮ ಸೇರಿಸಿ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ಗುಡಿಬಂಡೆಯನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಲು ಎಲ್ಲ ಅವಕಾಶಗಳು ಮುಕ್ತವಾಗಿವೆ’ ಎಂದು ಹೇಳಿದರು.

ಅಪ್ಸರ್ ಮಾತನಾಡಿ, ‘ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಸರ್ಕಾರ ಘೋಷಣೆ ಮಾಡುವ ತನಕ ನಿರಂತರವಾಗಿ ಹೋರಾಟ ಮಾಡಲಾಗುವುದು. ತಾಲ್ಲೂಕಿನ ಹಾಗೂ ಮಂಡಿಕಲ್ಲು ನಗೆರಗೇರೆ ಹೋಬಳಿ ಮುಖಂಡರು ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು’ ಎಂದರು.

ಗಂಗರಾಜು ಮಾತನಾಡಿ, ‘ಜನಪ್ರತಿನಿಧಿಗಳು ಪ್ರತ್ಯೇಕ ವಿಧಾನಸಭಾ ಕ್ಷೇತವಾಗಲು ಸಹಕರಿಸಬೇಕು’ ಎಂದರು.

ಸುಬ್ಬರಾಯಪ್ಪ, ಬಿ.ಮಂಜುನಾಥ್, ನವೀನ್, ಎಲ್.ಎನ್ ಈಶ್ವರಪ್ಪ, ವರ್ಲಕೊಂಡ ರಾಜು, ಶಿವಪ್ಪ, ಶ್ರೀನಿವಾಸ್, ಗುಂಪು ಮರದ ಆನಂದ್, ಶ್ರೀನಿವಾಸ್ ಯಾದವ್, ನರೇಂದ್ರ, ರವಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-257617003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.