ಗುಡಿಬಂಡೆ: ವಿಶ್ವ ಹಾಲು ದಿನ ಹಾಗೂ ದಿವಂಗತ ಎಂ.ವಿ. ಕೃಷ್ಣಪ್ಪ ಅವರ ಜನ್ಮದಿನಾಚರಣೆಯು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆಯಿತು.

ರೈತರ ಜೀವನಾಡಿಯಾದ ನಂದಿನಿ ಉತ್ಪನ್ನಗಳನ್ನು ಬಳಕೆ ಮಾಡುವ ಮೂಲಕ ರೈತರು ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕೆಂದು ಚಿಮುಲ್ ನಿರ್ದೇಶಕ ಆದಿನಾರಾಯಣರೆಡ್ಡಿ ತಿಳಿಸಿದರು.

ಉಪ ವ್ಯವಸ್ಥಾಪಕಿ ಡಾ. ನವ್ಯಶ್ರೀ ಮಾತನಾಡಿ, ಹುಟ್ಟಿದ ಮಗುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೆ ಹಾಲು ಪೌಷ್ಟಿಕ ಆಹಾರವಾಗಿದೆ. ಆದ್ದರಿಂದ ಪ್ರತಿ ವರ್ಷದ ಜೂನ್ 1ರಂದು ವಿಶ್ವ ಹಾಲು ದಿನ ಆಚರಿಸಲಾಗುತ್ತದೆ ಎಂದರು.

ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಲಕ್ಷ್ಮಿನಾರಾಯಣ, ಚಿಮುಲ್ ಶಿಬಿರ ಕಚೇರಿ ವಿಸ್ತರಣಾಧಿಕಾರಿ ಎಚ್.ಎಸ್. ಉಮೇಶ್ ರೆಡ್ಡಿ, ಎಂ.ವಿ. ಧರಣಿ ಕುಮಾರ್, ಮೋಹನ್, ಎಚ್.ಎನ್. ಚಂದ್ರಶೇಖರರೆಡ್ಡಿ, ರಹಮತ್ವುಲ್ಲಾ, ಪದಾಧಿಕಾರಿಗಳಾದ ಕೆ.ವಿ.ಕೃಷ್ಣಾರೆಡ್ಡಿ, ಬಿ.ಸಿ. ವೆಂಕಟೇಶ್, ಶ್ರೀನಿವಾಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-1458879138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.