ಮಂಗಳವಾರ, ಸೆಪ್ಟೆಂಬರ್ 28, 2021
21 °C

ಚಿಕ್ಕಬಳ್ಳಾಪುರ: ಭಕ್ತಿಯಿಂದ ಗುರು ಪೂರ್ಣಿಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಶನಿವಾರ ಶ್ರದ್ಧಾಭಕ್ತಿಯಿಂದ ಗುರು ಪೂರ್ಣಿಮೆ ಆಚರಿಸಲಾಯಿತು.

ಶಿರಡಿ ಸಾಯಿ ಬಾಬಾ ಮಂದಿರಗಳಲ್ಲಿ ದಿನವೀಡಿ ವಿಶೇಷ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಭಕ್ತರು ಬೆಳಿಗ್ಗೆಯಿಂದಲೇ ಬಾಬಾ ದರ್ಶನ ಪಡೆಯಲು ದೇವಾಲಯಗಳಲ್ಲಿ ಇದ್ದರು. ರಾತ್ರಿಯವರೆಗೂ ಭಕ್ತರು ದೇಗುಲಗಳಲ್ಲಿ ಸಾಲುಗಟ್ಟಿದ್ದರು.

ನಗರದ ಎಂ.ಜಿ.ರಸ್ತೆಯ ಮುನ್ಸಿಪಲ್‌ ಬಡಾವಣೆಯಲ್ಲಿರುವ ಸಿದ್ಧಿವಿನಾಯಕ, ಶಿರಡಿ ಸಾಯಿಬಾಬಾ ಹಾಗೂ ಅನ್ನಪೂರ್ಣೇಶ್ವರಿ ದೇವಾಲಯ ಮತ್ತು ಎಚ್‌.ಎಸ್.ಗಾರ್ಡನ್‌ನಲ್ಲಿರುವ ಸುಬ್ರಹ್ಮಣ್ಯೇಶ್ವರ, ಶನೈಶ್ವರ, ಶಿರಡಿ ಸಾಯಿಬಾಬಾ ಮಂದಿರ, ಆಂಜನೇಯ ಸ್ವಾಮಿ ದೇಗುಲದಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು. ನಗರದ ಹೊರವಲಯದ ಹಾರೋಬಂಡೆಯ ಸಾಯಿಬಾಬಾ ಮಂದಿರದಲ್ಲಿಯೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು.

ಎರಡು ದೇವಸ್ಥಾನಗಳಲ್ಲಿ ಸಾಯಿ ಬಾಬಾ ಅವರ ಮೂರ್ತಿಗಳಿಗೆ ವಿವಿಧ ಅಭಿಷೇಕ ನೆರವೇರಿಸಲಾಯಿತು. ಕಾಕಡಾರತಿ, ಕ್ಷೀರಾಭಿಷೇಕ, ಸತ್ಯನಾರಾಯಣಪೂಜೆ, ಹೋಮ, ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.