ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗದಿಂದ ಆರೋಗ್ಯ ಸದೃಢ: ಶ್ರೀಕಾಂತ್ ಪದ್ಮನಾಭ

Last Updated 9 ಫೆಬ್ರುವರಿ 2022, 4:35 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಗರದ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ಅಖಂಡ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ರಥಸಪ್ತಮಿ ಅಂಗವಾಗಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ವಿವಿಧ ತಂಡಗಳಲ್ಲಿ ನಿರಂತರ ಅಖಂಡ ಸೂರ್ಯ ನಮಸ್ಕಾರವನ್ನು ನಡೆಸಿಕೊಡಲಾಯಿತು.

ಜಿಲ್ಲಾ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಂಚಾಲಕ ಶ್ರೀಕಾಂತ್ ಪದ್ಮನಾಭ ಮಾತನಾಡಿ, ಸಂಸ್ಥೆಯಿಂದ ನಿರಂತರವಾಗಿ ಯೋಗ ತರಗತಿ ಏರ್ಪಡಿಸಿ ದೇಶದ ಪ್ರಜೆಗಳು ಆರೋಗ್ಯ ಮತ್ತು ಶಕ್ತಿಯುತವಾದ ಭಾರತ ಕಟ್ಟಲು ಪ್ರೇರಣಾದಾಯಕವಾಗಿ ಪತಂಜಲಿ ಯೋಗ ಶಿಕ್ಷಣ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜನರು ಯೋಗಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಮಕ್ಕಳಿಗೂ ಯೋಗಾಭ್ಯಾಸ ಮಾಡಿಸಬೇಕು ಎಂದು ಸಲಹೆ ನೀಡಿದರು,

ಕಾರ್ಯಕ್ರಮದಲ್ಲಿ ಸಂಚಾಲಕ ಸುಂದರಾಚಾರಿ, ಕೇಶವಮೂರ್ತಿ, ಡಿ.ವಿ. ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT