ಭಾನುವಾರ, ಏಪ್ರಿಲ್ 11, 2021
27 °C

ಚಿಕ್ಕಬಳ್ಳಾಪುರ: ಗಾಳಿ ಸಹಿತ ಜೋರು ಮಳೆ, ವಾಹನ ಸವಾರರ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಸಂಜೆ ಗಾಳಿ ಸಹಿತ ಜೋರು ಮಳೆ ಸುರಿಯಿತು.

ಮಳೆಯಿಂದಾಗಿ ನಗರದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಬೀದಿ‌ಬದಿ ವ್ಯಾಪಾರಿಗಳು ಪರದಾಡಬೇಕಾಯಿತು. ವಾಹನ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಮಳೆಯಿಂದ ಆಶ್ರಯಕ್ಕಾಗಿ ಜನ ಪರಿತಪ್ಪಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರು, ‌‌‌ಮಳ್ಳೂರು, ಮೇಲೂರು, ಹಂಡಿಗನಾಳ ಗ್ರಾಮಗಳ ಸುತ್ತಮುತ್ತ ಭಾರಿ ಮಳೆಯಾಗಿದೆ.

ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ಮೋಡ ಕವಿದ ವಾತವರಣವಿದ್ದು, ತಂಪಾದ ಗಾಳಿ ಬೀಸುತ್ತಿತ್ತು. ಸಂಜೆ ವೇಳೆಗೆ ಮಳೆ ಆರಂಭವಾಯಿತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸತತವಾಗಿ ಸುರಿಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು