ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಧಾರಾಕಾರವಾಗಿ ಸುರಿಯಿತು. ಜಿಲ್ಲೆಯ ಉತ್ತರ ಪಿನಾಕಿನಿ ನದಿ, ಜಕ್ಕಲಮಡುಗು ಜಲಾಶಯ, ಶ್ರೀನಿವಾಸಸಾಗರ, ಅಮಾನಿಬೈರ ಸಾಗರ ಕೆರೆ ಸೇರಿದಂತೆ ದೊಡ್ಡ ಕೆರೆಗಳು ಭರ್ತಿಯಾಗಿವೆ.
ಬಾಗೇಪಲ್ಲಿ ತಾಲ್ಲೂಕಿನ ಮಾಡಪ್ಪಲ್ಲಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಯಾವುದೇ ಅಪಾಯವಾಗಿಲ್ಲ. ಬಾಗೇಪಲ್ಲಿ ತಾಲ್ಲೂಕು ದೇವಿಕುಂಟೆ ಬಳಿ ರಸ್ತೆ ಬದಿಯ ಮೋರಿ ಕುಸಿದಿದ್ದು ಕೆಎಸ್‌ಆರ್‌ಟಿಸಿ ಬಸ್ ಆ ಮೋರಿಯಲ್ಲಿ ಸಿಲುಕಿ ಹಾಕಿಕೊಂಡಿತ್ತು. ಶಿಡ್ಲಘಟ್ಟದಲ್ಲಿ ತಾಲ್ಲೂಕು ಕಚೇರಿ ಮತ್ತು ಆವರಣ ನೀರಿನಿಂದ ಸೋರಿದ ಪರಿಣಾಮ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದವು.
ಚಿಂತಾಮಣಿ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ.ಗೌರಿಬಿದನೂರು ತಾಲ್ಲೂಕಿನ ರಮಾಪುರದಲ್ಲಿ ಮಳೆಯ ಪರಿಣಾಮವಾಗಿ ಮರಗಳು ನೆಲಕ್ಕುರುಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.