ಚಿಕ್ಕಬಳ್ಳಾಪುರ: ನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಬುಧವಾರ ಹೆಲ್ಮೆಟ್ ಕಡ್ಡಾಯದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಚಾಲನೆ ನೀಡಿದರು.

ನಗರದ ಪತ್ರಕರ್ತರ ಭವನದ ಬಳಿ ಜನ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿದರು. ಅಂಬೇಡ್ಕರ್ ವೃತ್ತ, ಬಿಬಿ ರಸ್ತೆಯ ಮೂಲಕ ಭುವನೇಶ್ವರಿ ವೃತ್ತ, ಬಜಾರ್ ರಸ್ತೆ, ಗಂಗಮ್ಮ ಗುಡಿರಸ್ತೆಯ ಮೂಲಕ ಎಂ.ಜಿ ರಸ್ತೆ ನಂತರ ಎಪಿಎಂಸಿ ಮಾರುಕಟ್ಟೆವರೆಗೂ ರ್ಯಾಲಿ ಸಾಗಿತು. ಹೆಲ್ಮೆಟ್ ಕಡ್ಡಾಯದ ಬಗ್ಗೆ ಘೋಷಣೆಗಳು ಮೊಳಗಿದವು.

ರ್ಯಾಲಿಗೆ ಚಾಲನೆ ನೀಡಿದ ಪಿ.ಎನ್.ರವೀಂದ್ರ, ಜೀವಕ್ಕಿಂತ ದೊಡ್ಡದು ಬೇರೊಂದಿಲ್ಲ. ಹೆಲ್ಮೆಟ್ನನ್ನು ಕಡ್ಡಾಯವಾಗಿ ದ್ವಿಚಕ್ರ ಸವಾರರು ಧರಿಸುವ ಮೂಲಕ ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಜನರ ರಕ್ಷಣೆ ದೃಷ್ಟಿಯಿಂದ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಬೈಕ್ ಸವಾರರು ಹೆಲ್ಮೆಟ್ ಧರಿಸುವುದನ್ನು ರೂಢಿಗತ ಮಾಡಿಕೊಳ್ಳಬೇಕು. ಇದರಿಂದ ಅಕಸ್ಮಿಕವಾಗಿ ನಡೆಯುವ ರಸ್ತೆ ಅಪಘಾತಗಳಿಂದ ನಮ್ಮ ಜೀವ ರಕ್ಷಣೆಗೆ ಹೆಲ್ಮೆಟ್ ದೊಡ್ಡ ಸಹಾಯ ಮಾಡುತ್ತದೆ ಎಂದರು.

ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯ ಬಗ್ಗೆ ಇತ್ತೀಚೆಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ. ಇದನ್ನು ಇದೇ ರೀತಿಯಲ್ಲಿ ಮುಂದುವರೆಸಿಕೊಂಡು ಹೋಗುವ ಮೂಲಕ ರಸ್ತೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ವಾಹನ ಸವಾರರು ಮುಂದಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡಿ, ಜಿಲ್ಲೆಯಲ್ಲಿ ಸಂಭವಿಸುವ ಅಪಘಾತಗಳಿಂದ ಜನರ ರಕ್ಷಣೆ, ಸಾವು, ನೋವು ತಡೆಯಲು ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು ಎಂದು ಕೋರಿದರು.

ಪತ್ರಕರ್ತರ ಸಂಘ ಸಾಮಾಜಿಕ ಕಾಳಜಿಯೊಂದಿಗೆ ಹೆಲ್ಮೆಟ್ ಕಡ್ಡಾಯದ ಬಗ್ಗೆ ಜನ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ. ಪತ್ರಕರ್ತರು, ಪೊಲೀಸರು ಸೇತುವೆವಾಗಿ ಕೆಲಸ ಮಾಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜ್ ನಾಯಕ್, ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ವಿ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಖಜಾಂಚಿ ಬಿ.ಕೆ.ಮುದ್ದುಕೃಷ್ಣ, ಸಂಚಾರ ಠಾಣೆ ಪಿಎಸ್ಐ ಮಂಜುಳಾ, ನಗರ ಠಾಣೆ ಪಿಎಸ್ಐ ಅಮರ್, ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮುಬಿಷೀರ್, ಕಾರ್ಯದರ್ಶಿ ಎಂ.ಆನಂದ್, ಡಿ.ಜೆ ಮಲ್ಲಿಕಾರ್ಜುನ್, ಹಿರಿಯ ಪತ್ರಕರ್ತರ ಸೋಮಶೇಖರ್, ಕೆನಡಿ, ಸಿ.ಬಾಲಕೃಷ್ಣ, ಟಿ.ಎಸ್.ನಾಗೇಂದ್ರಬಾಬು, ಜಿಲಾನಿ, ದಯಾಸಾಗರ್, ಸೋ.ಸು.ನಾಗೇಂದ್ರನಾಥ್, ಮಲ್ಲಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.