ಶುಕ್ರವಾರ, ಮೇ 27, 2022
22 °C

ಚಿಕ್ಕಬಳ್ಳಾಪುರ: ಕರ್ನಾಟಕ ಎಕ್ಸ್‌ಪ್ರೆಸ್‌ನಲ್ಲಿ ಬಾಂಬ್, ಹುಸಿ ಕರೆ ಮಾಡಿದವನ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ದೆಹಲಿ ಮತ್ತು ಕರ್ನಾಟಕ ನಡುವೆ ಸಂಚರಿಸುವ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಬಾಂಬ್ ನಿಷ್ಕ್ರಿಯ ದಳ, ರೈಲ್ವೆ ಹಾಗೂ ಪೊಲೀಸ್ ಅಧಿಕಾರಿಗಳು ರೈಲಿನಲ್ಲಿ ತಪಾಸಣೆ ನಡೆಸಿದ್ದಾರೆ. 

ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ರಾಯಚೂರಿನ ವಾಡಿಯಲ್ಲಿ ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ  ಪೊಲೀಸರು ತಿಳಿಸಿದ್ದಾರೆ.
 
ಆಂಧ್ರಪ್ರದೇಶ ದಾಟಿದ ನಂತರ ಈ ರೈಲು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪುತ್ತದೆ.

ರೈಲು ನಿಲ್ಲಿಸಿ ತಪಾಸಣೆ ನಡೆಸಿದರೆ ಜನರು ಭಯಗೊಳ್ಳುವರು. ಈ ಮೇರೆಗೆ ಚಲಿಸುತ್ತಿರುವ ರೈಲಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ಇಡಲಾಗಿದೆ ಎಂದು ಕರೆ ಮಾಡಿದ್ದ ವ್ಯಕ್ತಿಯನ್ನು  ಈಗಾಗಲೇ ಬಂಧಿಸಲಾಗಿದೆ‌. ಇದು ಸುಳ್ಳು ಕರೆ ಆಗಿದೆ. ಹೀಗಿದ್ದರೂ ತಪಾಸಣೆ ನಡೆಯುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಪ್ರಜಾವಾಣಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು