ಶನಿವಾರ, ಜನವರಿ 23, 2021
18 °C

ಮನೆ ಕುಸಿತ: ಕುಟುಂಬಕ್ಕೆ ₹10 ಲಕ್ಷ ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ಜಡಿ ಮಳೆಗೆ ಮನೆ ಕುಸಿದು, ತಂದೆ ಮತ್ತು ಮಗ ಮೃತಪಟ್ಟಿದ್ದ ಕುಟುಂಬಕ್ಕೆ ಬುಧವಾರ ಶಾಸಕ ಎಂ.ಕೃಷ್ಣಾರೆಡ್ಡಿ ₹10 ಲಕ್ಷದ ಪರಿಹಾರದ ಚೆಕ್ ವಿತರಿಸಿದರು.

ಗ್ರಾಮದಲ್ಲಿ ಅ.23ರಂದು ಜಡಿಮಳೆಯಿಂದಾಗಿ ನಸುಕಿನಲ್ಲಿ ಮನೆಯ ಚಾವಣಿ ಕುಸಿದುಬಿದ್ದು ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದರು. ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು. ಶಾಸಕ ಎಂ.ಕೃಷ್ಣಾರೆಡ್ಡಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಹಾಗೂ ವೈಯಕ್ತಿಕವಾಗಿ ತಲಾ ₹50 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು.

ಅವರ ಸೂಚನೆಯಂತೆ ಅಧಿಕಾರಿಗಳು ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ತಲಾ ₹5 ಲಕ್ಷ ಪರಿಹಾರ ಮಂಜೂರು ಮಾಡಿತ್ತು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮೃತರ ಪತ್ನಿ ಮುನಿರಾಜಮ್ಮ ಅವರಿಗೆ ಸರ್ಕಾರದ ₹10 ಲಕ್ಷ ಹಾಗೂ ವೈಯಕ್ತಿಕ ₹1 ಲಕ್ಷ ಮೊತ್ತದ ಚೆಕ್‌ಗಳನ್ನು ಶಾಸಕರು ವಿತರಿಸಿದರು.

‘ಗ್ರಾಮ ಪಂಚಾಯಿತಿಯಿಂದ ಮನೆಯನ್ನು ಕಟ್ಟಿಸಿಕೊಡಲಾಗುವುದು. ಮನೆಯಲ್ಲಿದ್ದ ಗಾಯಾಳುಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬಂದಿದ್ದು ತಡವಾಯಿತು. ಅಷ್ಟರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬಂದಿದ್ದರಿಂದ ಸ್ವಲ್ಪ ತಡವಾಗಿದೆ. ಅವರಿಗೆ ಮೊದಲಿನಂತೆ
ಮನೆಯನ್ನು ನಿರ್ಮಿಸಿಕೊಡಲಾಗುವುದು’ ಎಂದರು.
ತಹಶೀಲ್ದಾರ್ ಹನುಮಂತರಾಯಪ್ಪ, ಜೆ.ಡಿ.ಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.