ಸೋಮವಾರ, ಆಗಸ್ಟ್ 15, 2022
22 °C

ವೈದ್ಯರಿಗೆ ಗೌರವಧನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿಯ ವೇತನಕ್ಕಾಗಿ ಶಾಸಕ ಎಂ.ಕೃಷ್ಣಾರೆಡ್ಡಿ ₹7.50 ಲಕ್ಷ ನೀಡಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 35 ಸಿಬ್ಬಂದಿಗೆ ಗೌರವಧನ ವಿತರಿಸಿ ಮಾತನಾಡಿ, ಎಲ್ಲ ಸಂಘಸಂಸ್ಥೆಗಳು, ರಾಜಕಾರಣಿಗಳು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರಿಗೆ ಅಷ್ಟಾಗಿ ತೊಂದರೆಯಾಗಲಿಲ್ಲ
ಎಂದರು.

ರಾಜ್ಯದ ಹಲವಾರು ಕಡೆಗಳ ಆಸ್ಪತ್ರೆಗಳಲ್ಲಿ ಬೆಡ್‌ಗಳಿಲ್ಲ. ಆಮ್ಲಜನಕ, ವೆಂಟಿಲೇಟರ್‌ ಇಲ್ಲ ಎಂಬ ದೂರು ಬಂದಿವೆ. ಆದರೆ ನಮ್ಮ ತಾಲ್ಲೂಕಿನಲ್ಲಿ ಅಂತಹ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ಕೊರೊನಾ ಸಂದರ್ಭದಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಾಗಬಾರದು ಎಂದು 3 ತಿಂಗಳವರೆಗೆ ಕೆಲಸ ಮಾಡಲು ಸ್ವಯಂಪ್ರರಿತವಾಗಿ ವೈದ್ಯರು ಮತ್ತು ಸಿಬ್ಬಂದಿ ಮುಂದೆ ಬಂದಿದ್ದರು. ಅವರಿಗೆ ಗೌರವಧನನ್ನು ನೀಡುತ್ತಿರುವುದಾಗಿ ತಿಳಿಸಿದರು.

ತಹಶೀಲ್ದಾರ್ ಹನುಮಂತರಾಯಪ್ಪ, ಡಿವೈಎಸ್ಪಿ ವಿ.ಲಕ್ಷ್ಮಯ್ಯ, ಸತ್ಯನಾರಾಯಣ ಮಹೇಶ್, ತಾಲ್ಲೂಕು ಆರೋಗ್ಯಧಿಕಾರಿ ಡಾ.ಸ್ವಾತಿ, ಆಡಳಿತ ವೈದ್ಯಾಧಿಕಾರಿ ಡಾ.ಸಂಕೋಷ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.