ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಎಷ್ಟು ಬಾರಿ ಧರಣಿ ಕುಳಿತಿದ್ದಾರೆ: ಡಾ.ಕೆ.ಸುಧಾಕರ್ ಪ್ರಶ್ನೆ

Last Updated 10 ಜನವರಿ 2020, 10:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನೆರೆ ಹಾಗೂ ಪ್ರವಾಹದ ಪರಿಹಾರವಾಗಿ ಕೇಂದ್ರ ಸರ್ಕಾರ ಎರಡು ಕಂತಿನಲ್ಲಿ ರಾಜ್ಯಕ್ಕೆ ಸುಮಾರು ₹3 ಸಾವಿರ ಕೋಟಿ ನೀಡಿದೆ. ಇದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಡಿಗಾಸು ಎಂದು ಹೇಳುವುದು ಸರಿಯಲ್ಲ. ನಾನಾಗಿದ್ದರೆ ಪ್ರಧಾನಮಂತ್ರಿ ಮನೆ ಮುಂದೆ ಧರಣಿ ಕುಳಿತುಕೊಳ್ಳುತ್ತಿದ್ದೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಎಷ್ಟು ಬಾರಿ ಧರಣಿ ಕುಳಿತಿದ್ದಾರೆ ಜನರಿಗೆ ತಿಳಿಸಲಿ’ ಎಂದು ಶಾಸಕ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನದ ಬಗ್ಗೆ ಗೊಂದಲ ಬೇಡ. ಮುಖ್ಯಮಂತ್ರಿ ಅವರು ಒಳ್ಳೆಯ ಮೂಹೂರ್ತ, ಶುಭಗಳಿಗೆಯಲ್ಲಿ ನಮಗೆ ಅಧಿಕಾರ ಕೊಡಲು ತೀರ್ಮಾನ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಂದೂ ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ. ಹಾಗಾಗಿ ಅವರು ನಮಗೆ ಕೊಟ್ಟ ಮಾತು ತಪ್ಪುವುದಿಲ್ಲ ಎಂದು ನಂಬಿರುವೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT