ಚಿಂತಾಮಣಿ: ಕೈವಾರದ ಯೋಗಿನಾರೇಯಣ ಮಠದಲ್ಲಿ ಸೋಮವಾರ ವೈಶಾಖಮಾಸದ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಮತ್ತು ರಥೋತ್ಸವ ನಡೆಯಿತು.

ಗರ್ಭಗುಡಿಯಲ್ಲಿರುವ ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಮೂಲ ಬೃಂದಾವನವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಹುಣ್ಣಿಮೆ ಪೂಜೆಗಾಗಿ ಪೀಠವನ್ನು ಅಲಂಕರಿಸಿ ಶ್ರೀದೇವಿ ಭೂದೇವಿ ಸಮೇತ ಅಮರನಾರೇಯಣಸ್ವಾಮಿ ಹಾಗೂ ತಾತಯ್ಯನವರ ಉತ್ಸವ ಮೂರ್ತಿಗಳನ್ನು ಕುಳ್ಳರಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ತಾತಯ್ಯವರವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಕರೆತಂದು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ದೇವಾಲಯದ ಸುತ್ತಲೂ ರಥೋತ್ಸವ ನಡೆಸಲಾಯಿತು. ನೂರಾರು ಜನ ಭಕ್ತರು ರಥದೊಂದಿಗೆ ಸುತ್ತು ಹಾಕಿ ಭಕ್ತಿಯನ್ನು ಮೆರೆದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸಲಾಗಿತ್ತು.

ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಸಂಗೀತ, ಪ್ರವಚನ ಕಾರ್ಯಕ್ರಮಗಳು ನಡೆದವು. ರಾತ್ರಿಯು ಸಹ ಭಜನೆ. ಕೀರ್ತನೆ ತತ್ವಪದಗಳ ಗಾಯನದಲ್ಲಿ ಮಗ್ನರಾಗಿದ್ದರು.

ಆಲಂಬಗಿರಿ ದೇವಾಲಯದಿಂದ 1 ಕಿ.ಮೀ ದೂರವಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಧರ್ಮಾಧಿಕಾರಿ ಎಂ.ಆರ್.ಜಯರಾಂ ಹಾಗೂ ಕೈವಾರ ಶ್ರೀ ಯೋಗಿನಾರೇಯಣ ಮಠದ ಟ್ರಸ್ಟಿಗಳು ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.