ಗೌರಿಬಿದನೂರು: ತಾಲ್ಲೂಕಿನ ಚೀಕಟಗೆರೆ ಗ್ರಾಮದಲ್ಲಿ ಅಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಶ್ರೀನಿವಾಸ್ ಅವರಿಗೆ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ ಕಠಿಣ ಶಿಕ್ಷೆ ಮತ್ತು ₹30ಸಾವಿರ ದಂಡವನ್ನು ಶುಕ್ರವಾರ ವಿಧಿಸಿದೆ.
ಆರೋಪಿ 2018ರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ್ದ ಅಬಕಾರಿ ಪೊಲೀಸರು 12,960 ಲೀಟರ್ ಮದ್ಯ ವಶಪಡಿಸಿಕೊಂಡಿದ್ದರು. ಸುದೀರ್ಘ ವಿಚಾರಣೆ ನಂತರ ಆರೋಪಿಗೆ ನ್ಯಾಯಾಲಯ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದೆ.