ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಮೂಲಕ ಕ್ರಿಯಾ ಯೋಜನೆ ಅನುಷ್ಠಾನಗೊಳಿಸಿ

ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಫೌಜಿಯಾ ತರನ್ನುಮ್ ಸೂಚನೆ
Last Updated 17 ಏಪ್ರಿಲ್ 2020, 15:51 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ’ಲಾಕ್‌ಡೌನ್‌ ಅವಧಿಯಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಲಿಕಾ ಅಭ್ಯಾಸ, ಪುನರ್ ಮನನದ ಬಗ್ಗೆ ಆನ್‍ಲೈನ್ ತಂತ್ರಾಂಶ ಬಳಕೆಯ ಮೂಲಕ ಅವಲೋಕನದ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು‘ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ’ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ವರ್ಷವಿಡೀ ಶಿಕ್ಷಣ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿತ್ತು‘ ಎಂದು ಹೇಳಿದರು.

’ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ಇನ್ನೂ ಹೆಚ್ಚಿನ ಕಾಲಾವಕಾಶ ಸಿಕ್ಕಂತಾಗಿದೆ. ಆದ್ದರಿಂದ ಲಾಕ್‌ಡೌನ್ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಆನ್‌ಲೈನ್‌ ವ್ಯವಸ್ಥೆ ಮೂಲಕ ಅವಲೋಕಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು‘ ಎಂದು ತಿಳಿಸಿದರು.

ಇದೇ ವೇಳೆ ಸಿಇಒ ಅವರು, ’ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು‘ ಎಂದು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಜಿ.ನಾಗೇಶ್, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT