ಸೋಮವಾರ, ಜನವರಿ 20, 2020
27 °C
ಜಿಲ್ಲಾಧಿಕಾರಿ ಜತೆ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಸಭೆ

ಕಾಮಗಾರಿ ತ್ವರಿತವಾಗಿ ಅನುಷ್ಠಾನಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಯೋಜನೆಗಳ ಕಾಮಗಾರಿಗಳ ತ್ವರಿತ ಅನುಷ್ಠಾನದ ಬಗ್ಗೆ ಶಾಸಕ ಎನ್.ಹೆಚ್.ಶಿವಶಂಕರರೆಡ್ಡಿ ಅವರು ಶನಿವಾರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಿವಶಂಕರರೆಡ್ಡಿ ಅವರು, ‘ಎಚ್.ನರಸಿಂಹಯ್ಯ ವಿಜ್ಞಾನ ಕೇಂದ್ರದಲ್ಲಿ ಸಭಾಂಗಣ ಕಾಮಗಾರಿ ಪೂರ್ಣಗೊಳಿಸಬೇಕು. ತಾರಾಲಯ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು. ಕುರೂಡಿ ಅರಣ್ಯ ಪ್ರದೇಶದಲ್ಲಿ ನೀರು ಸಂರಕ್ಷಣಾ ಯೋಜನೆಯನ್ನು ಜಾರಿಗೊಳಿಸಬೇಕು. ಮಿನಿ ವಿಧಾನಸೌಧ ಹಾಗೂ ಅಂಬೇಡ್ಕರ್ ಅಧ್ಯಯನ ಕೇಂದ್ರದ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಗೌರಿಬಿದನೂರು ತಹಶೀಲ್ದಾರ್ ಶ್ರೀನಿವಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು