ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಆಳ ಅಧ್ಯಯನ ಮುಖ್ಯ

ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
Last Updated 21 ಅಕ್ಟೋಬರ್ 2020, 16:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಗಳಿಸಲು ಓದಿನಷ್ಟೇ ಕೌಶಲವೂ ಮುಖ್ಯ. ಇವತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಆದ್ದರಿಂದ ವಿದ್ಯಾರ್ಥಿಗಳು ಕೌಶಲಕ್ಕೆ ಒತ್ತು ನೀಡಬೇಕು’ ಎಂದು ನಗರದ ಹೊರ ವಲಯದಲ್ಲಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದ ಡೀನ್ ಪಿ.ಹರೀಶ್ ಹೇಳಿದರು.

ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವರ್ಚುವಲ್ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲವನ್ನು ಬೆಳೆಸಿಕೊಳ್ಳಬೇಕು. ಎಷ್ಟೋ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

‘ಸತತ ಅಧ್ಯಯನದಿಂದ ಜ್ಞಾರ್ನಾಜನೆ ಹೆಚ್ಚಾಗಲು ಸಾಧ್ಯ ಹೆಚ್ಚುತ್ತದೆ. ಆದರೆ ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಒಂದು ತರಗತಿ ಮುಗಿದ ತಕ್ಷಣ ಕಲಿಕೆ ಮುಗಿಯುವುದಿಲ್ಲ. ನಿರಂತರವಾದ ಅಧ್ಯಯನ ಇದ್ದರೆ ಮಾತ್ರ ಯಾವುದೇ ರಂಗದಲ್ಲಿ ಯಶಸ್ಸು ಸಾಧಿಸಬಹುದು’ ಎಂದರು.

‘ಪ್ರಸ್ತುತ ದಿನಗಳಲ್ಲಿ ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಬರೀ ಪುಸ್ತಕಕ್ಕೆ ಸೀಮಿತವಾಗಬಾರದು. ದೇಶ ಮತ್ತು ಸಮಾಜದ ಒಳಿತಿಗೆ ವಿಭಿನ್ನ ಯೋಚನೆಗಳನ್ನು ಮಾಡಬೇಕು. ತಂತ್ರಜ್ಞಾನ ಯುಗದಲ್ಲಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.

‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆಯೆ ದೇಶದ ಭವಿಷ್ಯ ನಿಂತಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಂಜಿನಿಯರ್‌ಗಳ ಪಾತ್ರ ಅಮೂಲ್ಯವಾಗಿರುವುದರಿಂದ ಆಳವಾದ ಅಧ್ಯಯನಕ್ಕೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಕಾಲೇಜಿನಿಂದ ವಿವಿಧ ವಿಭಾಗಗಳ ಒಟ್ಟು 621 ವಿದ್ಯಾರ್ಥಿಗಳು ಪದವಿ ಪಡೆದರು. ಕಾಲೇಜಿನ ಪ್ರಾಂಶುಪಾಲ ಎಸ್.ಜಿ.ಗೋಪಾಲಕೃಷ್ಣ, ಪರೀಕ್ಷಾ ನಿಯಂತ್ರಕ ಎಚ್.ಸಿ.ಯೋಗೀಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಜಿ.ಎಂ.ಬಸವರಾಜ, ಕೆ.ಎನ್.ನಾಗೇಶ್, ಎಂ.ವಿ.ಸರ್ವೇಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT