ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಚ್‌ಇಎಲ್‌ ವತಿಯಿಂದ ನಿರ್ಮಿಸಿದ ಹೆಣ್ಣುಮಕ್ಕಳ ಶೌಚಾಲಯ ಉದ್ಘಾಟನೆ

ಆವಲಗುರ್ಕಿಯ ಸರ್ಕಾರಿ ಪ್ರೌಢಶಾಲೆ
Last Updated 2 ಅಕ್ಟೋಬರ್ 2018, 14:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಹಳ್ಳಿಗಳ ದೇಶವಾದ ಭಾರತದಲ್ಲಿ ಗ್ರಾಮಗಳ ಅಭಿವೃದ್ಧಿಯಾಗದೇ ದೇಶದ ಅಭಿವೃದ್ಧಿ ಅಸಾಧ್ಯ. ಹೀಗಾಗಿ ಗ್ರಾಮೀಣ ಪ್ರದೇಶವನ್ನು ಸಬಲೀಕರಣಗೊಳಿಸುವುದು ಇಂದಿನ ಅಗತ್ಯವಾಗಿದೆ’ ಎಂದು ‘ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್’ನ (ಬಿಎಚ್‌ಇಎಲ್‌) ಕೈಗಾರಿಕೆ ಸಿಸ್ಟಮ್ಸ್‌ ಗ್ರೂಪ್‌ನ (ಐಎಸ್‌ಜಿ) ಬೆಂಗಳೂರು ವಿಭಾಗದ ಹಂಗಾಮಿ ಪ್ರಧಾನ ವ್ಯವಸ್ಥಾಪಕ ಶಕೀಲ್ ಕುಮಾರ್ ಮನೋಚಾ ಹೇಳಿದರು.

ತಾಲ್ಲೂಕಿನ ಆವಲಗುರ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬಿಎಚ್‌ಇಎಲ್‌ನ ಐಎಸ್‌ಜಿಯ ‘ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ’ (ಸಿಎಸ್‌ಆರ್) ನಿಧಿ ಅಡಿ ನಿರ್ಮಿಸಿದ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜತೆಗೆ ಆರೋಗ್ಯ, ಶಿಕ್ಷಣ, ನೈರ್ಮಲ್ಯ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ಧಿಪಡಿಸಿದಾಗ ಮಾತ್ರ ಗಾಂಧೀಜಿ ಕಂಡಿದ್ದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಸಕಾರಗೊಂಡು ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸುವ ನಿಟ್ಟಿನಲ್ಲಿ ಸಂಸ್ಥೆ ಸದಾ ಸಹಕಾರ ನೀಡುತ್ತಿದೆ. ನಮ್ಮ ಸಂಸ್ಥೆಯ ಲಾಭದ ಶೇ 27ರಷ್ಟು ಹಣವನ್ನು ಇಂತಹ ಸಮಾಜಮುಖಿ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಐದು ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ನೃತ್ಯ, ನಾಟಕ ಪ್ರದರ್ಶಿಸಿದರು. ಬಿಎಚ್‌ಇಎಲ್‌ ಐಎಸ್‌ಜಿ ಪ್ರಧಾನ ವ್ಯವಸ್ಥಾಪಕರಾದ ಎ.ವೆಂಕಟೇಶ್, ಪಿ.ಪಿ.ಶಹಾ, ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ಆರ್ ಪಟ್ನಾಯಕ್, ಉಪ ಪ್ರಧಾನ ವ್ಯವಸ್ಥಾಪಕ ಜೆ. ಜಾನ್ ಅಂಬ್ರೋಸ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶಾಂತಲಾ, ಮುಖ್ಯಶಿಕ್ಷಕಿ ಎಸ್.ವಿಜಯವತಿ, ಶಿಕ್ಷಕ ಕೆ.ಎಂ.ರೆಡ್ಡಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT