ಬುಧವಾರ, ಆಗಸ್ಟ್ 4, 2021
23 °C

ಚಿಕ್ಕಬಳ್ಳಾಪುರ: 38 ಜನರಿಗೆ ಕೋವಿಡ್-19, ಸೋಂಕಿತರ ಸಂಖ್ಯೆ 451ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರವೂ  38 ಜನರಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 451ಕ್ಕೆ ಏರಿಕೆಯಾಗಿದೆ. 

ಜಿಲ್ಲೆಯಲ್ಲಿ ಸೋಮವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ 16, ಬಾಗೇಪಲ್ಲಿ 2, ಚಿಂತಾಮಣಿ 14 ಮತ್ತು ಗೌರಿಬಿದನೂರು 5 ಶಿಡ್ಲಘಟ್ಟ ತಾಲ್ಲೂಕಿನ ಒಬ್ಬರಿಗೆ ಕೋವಿಡ್‌ ತಗುಲಿರುವುದು ಪತ್ತೆಯಾಗಿದೆ.

ಕೋವಿಡ್‌ಗೆ ತುತ್ತಾಗಿರುವ ಚಿಕ್ಕಬಳ್ಳಾಪುರ ನಗರಸಭೆಯ ಆಯುಕ್ತ ಡಿ.ಲೋಹಿತ್‌ ಅವರ ಕುಟುಂಬದ ಸದಸ್ಯರಿಗೂ ಸೋಂಕು ತಗುಲಿರುವುದು ತಿಳಿದುಬಂದಿದೆ. ಚಿಕ್ಕಬಳ್ಳಾಪುರದ 80 ವಯಸ್ಸಿನ ಸೋಂಕಿತೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 138, ಬಾಗೇಪಲ್ಲಿ 74, ಚಿಂತಾಮಣಿ 68, ಗೌರಿಬಿದನೂರು 141, ಶಿಡ್ಲಘಟ್ಟ 28 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದೆ.

ಸೋಂಕಿತರ ಪೈಕಿ ಈವರೆಗೆ 15 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 235 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 205 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು