ಚಿಕ್ಕಬಳ್ಳಾಪುರ: ‘ಒಂದು ವಾರದಿಂದ ಕೋವಿಡ್ 19 ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಗುರುವಾರ ಒಂದೇ ದಿನ ಶೇ 20 ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಗೌರಿಬಿದನೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ತಡವಾಗಿ ಸೋಂಕಿತರ ಪ್ರಮಾಣ ಹೆಚ್ಚಾದ ಕಾರಣಕ್ಕೆ ಗುಣಮುಖರಾದವರ ಸಂಖ್ಯೆ ಕಡಿಮೆ ಇತ್ತು. ಅದೀಗ ಹೆಚ್ಚಳವಾಗಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗಿದೆ’ ಎಂದು ತಿಳಿಸಿದರು.

‘ಎಲ್ಲ ಹೊಣೆಗಾರಿಕೆಗಳನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಮುಖ್ಯಮಂತ್ರಿ ಅವರು ಆಸ್ಪತ್ರೆಯಲ್ಲಿದ್ದರೂ ಸಚಿವರು, ಅಧಿಕಾರಿಗಳಿಗೆ ಅಲ್ಲಿಂದಲೇ ಪರಿಸ್ಥಿತಿ ನಿರ್ವಹಣೆಗೆ ಸೂಚನೆ ನೀಡಿದ್ದಾರೆ. ಕಂದಾಯ ಸಚಿವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಆಪತ್ತಿನಲ್ಲಿ ಸಿಲುಕಿರುವವರ ರಕ್ಷಣೆಗೆ ಆದ್ಯತೆ ನೀಡಲು ಸೂಚಿಸಿದ್ದಾರೆ. ಅಭಿವೃದ್ಧಿ ಮತ್ತು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಡೆದಿವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.