ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ದಿನಾಚರಣೆ: ಸಿದ್ಧತೆಗೆ ಸೂಚನೆ

Last Updated 22 ಜುಲೈ 2019, 14:37 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್‌ 15 ರಂದು ಆಚರಿಸುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಆಗಸ್ಟ್ 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆ ನೀರು ಸಂಗ್ರಹದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ನಗರಸಭೆ ಮತ್ತು ಪುರಸಭೆಗಳ ಕಟ್ಟಗಳು ಸೇರಿದಂತೆ, ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಸಂಗ್ರಹಿಸುವ ಕೆಲಸವಾಗಬೇಕು’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಆಗಸ್ಟ್ 1 ರಿಂದ ಮಳೆ ನೀರು ಸಂಗ್ರಹದ ಬಗ್ಗೆ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಬೇಕು. ತಾಲ್ಲೂಕು ಮಟ್ಟದ ವಿಜೇತರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಬೇಕು. ಕಾರ್ಯಕ್ರಮದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳು ಗಮನ ಹರಿಸಬೇಕು’ ಎಂದು ತಿಳಿಸಿದರು.

‘ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸುಣ್ಣ-ಬಣ್ಣ ಬಳಿಸಬೇಕು. ಆ.15 ರಂದು ಕಟ್ಟಡಗಳ ಮೇಲೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಮಕ್ಕಳಿಗೆ ಈಗಿನಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ತರಬೇತಿ ನೀಡಬೇಕು’ ಎಂದರು.

‘ಮಳೆ ನೀರು ಸಂಗ್ರಹ ಕುರಿತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಅಂಧ ಮಕ್ಕಳಿಗೆ ಪಥ ಸಂಚಲನ ಕುರಿತು ತರಬೇತಿ ನೀಡಬೇಕು. ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಜಿಲ್ಲೆಯನ್ನು ಪ್ರತಿನಿಧಿಸಿದ ಕ್ರಿಡಾಪಟುಗಳಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು’ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ್ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT