ಶನಿವಾರ, ಸೆಪ್ಟೆಂಬರ್ 18, 2021
24 °C
ಜಿಲ್ಲೆಯ ವಿವಿಧೆಡೆ ಸ್ವಾತಂತ್ರ್ಯ ದಿನದ ಸಂಭ್ರಮ

ಚಿಕ್ಕಬಳ್ಳಾಪುರ: ಹುತಾತ್ಮರ ತ್ಯಾಗ, ಬಲಿದಾನದ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲೆಯ ಸಂಘ ಸಂಸ್ಥೆಗಳಲ್ಲಿ 75ನೇ ಸ್ವಾತಂತ್ರ್ಯದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬಲಿದಾನವಾದ ಮಹನೀಯರ ಹೋರಾಟಗಳನ್ನು ಸ್ಮರಿಸಿದರು.

ನಗರಸಭೆ: ನಗರಸಭೆ ಕಟ್ಟಡಕ್ಕೆ ಶನಿವಾರ ರಾತ್ರಿಯಿಂದಲೇ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಜಿಲ್ಲೆಯೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿತ್ತು ಎಂದು ಹೇಳಿದರು.

ಜಿಲ್ಲೆಯ ವಿಧುರಾಶ್ವತ್ಥ ಕರ್ನಾಟಕ ಜಲಿಯನ್ ವಾಲಾಬಾಗ್ ಎನಿಸಿದೆ. ಜಿಲ್ಲೆಯ ಹಲವು ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ
ದ್ದಾರೆ. ಯುವ ಸಮುದಾಯದ ಸ್ವಾತಂತ್ರ್ಯ ಹೋರಾಟಗಳ ಮಹೋನ್ನತ ಆದರ್ಶಗಳನ್ನು ಎಂದಿಗೂ ಸ್ಮರಿಸಿಕೊಳ್ಳಬೇಕು ಎಂದರು. ನಗರಸಭೆಯ ಸಿಬ್ಬಂದಿ ಹಾಜರಿದ್ದರು.

ಬಿಜಿಎಸ್ ಶಾಲೆ: ಅಗಲಗುರ್ಕಿಯ ಬಿಜಿಎಸ್ ಶಾಲೆಯಲ್ಲಿ ಬಿಡಿಸಿದ್ದ ಭಾರತದ ದೇಶದ ಭೂಪಟ ಗಮನ ಸೆಳೆಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಭಾವುಟದ ಸುತ್ತ ನೃತ್ಯ ಮಾಡಿದರು. ವಿವಿಧ ವೇಷಭೂಷಣವನ್ನು ತೊಟ್ಟಿದ್ದ ಮಕ್ಕಳು ಗಮನ ಸೆಳೆದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಮುಖ್ಯ ಶಿಕ್ಷಕ ಮೋಹನ್ ಕುಮಾರ್ ಮತ್ತಿತರರು ಇದ್ದರು.

ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ: ಚಿಕ್ಕಬಳ್ಳಾಪುರದ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಜಿಲ್ಲಾ ಅಧ್ಯಕ್ಷ ಜಿ.ವಿನ್ಸೆಂಟ್ ಅಧ್ಯಕ್ಷತೆವಹಿಸಿದ್ದರು. ಸೆಂಟ್ ಜಾನ್ಸ್ ಮಾರ್ಥೋಮ ಚರ್ಚಿನ ಸಭಾಪಾಲಕ ರೆವರೆಂಡ್ ಕೆ.ಎ. ವರ್ಗಿಸ್ ಧ್ವಜಾರೋಹಣ ನೆರವೇರಿಸಿದರು.

ಆನಂದ್ ಕುಮಾರ್, ಕಾರ್ಯದರ್ಶಿ ಹರಿಪ್ರಸಾದ್, ಖಜಾಂಜಿ ಜೊಬ್, ಸದಸ್ಯರಾದ ಜೋಸೆಫ್, ಮಾರ್ಕ್ ವೆಂಕಟೇಶ್ ವೇದಿಕೆ ಸದಸ್ಯರು ಪಾಲ್ಗೊಂಡಿದ್ದರು.

ನಾಯನಹಳ್ಳಿ ಶಾಲೆ: ಮಳ್ಳೂರು ಜಿ.ಪಾಪಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ ನಡೆಯಿತು. ಆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರೈಲು ಹಳಿಗಳನ್ನು ಕೀಳುವುದು, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಹಲವು ರೀತಿಯಲ್ಲಿ ಹೋರಾಟಗಳಿಗೆ ಜಿಲ್ಲೆಯು ಸಾಕ್ಷಿಯಾಯಿತು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ
ತಿಳಿಸಿದರು.

ತಾಲ್ಲೂಕಿನ ನಾಯಕನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖಂಡ ಎಸ್.ನಾರಾಯಣಸ್ವಾಮಿ, ಎನ್.ನವೀನ್ ಕುಮಾರ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಾ, ಮುಖ್ಯಶಿಕ್ಷಕ ಜಗನ್ನಾಥ್, ಶಿಕ್ಷಕರಾದ ಲಕ್ಷ್ಮಿನಾರಾಯಣ, ನಿವೃತ್ತ ಶಿಕ್ಷಕ ಚನ್ನರಾಯಪ್ಪ, ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು