ತಿಂಗಳಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ

7

ತಿಂಗಳಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ನಗರದ ಜನರಿಗೆ ಅಗ್ಗದ ದರದಲ್ಲಿ ಉಪಾಹಾರ, ಊಟ ನೀಡುವ ಇಂದಿರಾ ಕ್ಯಾಂಟಿನ್ ಒಂದು ತಿಂಗಳ ಒಳಗೆ ಉದ್ಘಾಟಿಸಲಾಗುತ್ತದೆ’ ಎಂದು ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ ಹೇಳಿದರು.

ನಗರದ ಎಪಿಎಂಸಿ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಕ್ಯಾಂಟಿನ್ ಕಟ್ಟಡ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

‘ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾಂಟಿನ್ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗಾಗಲೇ ಕ್ಯಾಂಟಿನ್ ಕಟ್ಟಡ, ಕಾಂಪೌಂಡ್ ಸೇರಿದಂತೆ ಶೇ 95 ರಷ್ಟು ಕಾಮಗಾರಿ ಮುಗಿದಿದೆ. ಬಾಕಿ ಕಾಮಗಾರಿ ಶೀಘ್ರದಲ್ಲಿಯೇ ಮುಗಿಯಲಿವೆ’ ಎಂದು ತಿಳಿಸಿದರು.

ಜಿಲ್ಲಾ ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಎನ್.ಭಾಸ್ಕರ್, ಪೌರಾಯುಕ್ತ ಉಮಾಕಾಂತ್, ನಗರಸಭೆ ಎಂಜಿನಿಯರ್ ರಾಮಯ್ಯ, ಬಿ.ಶಿಲ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !