ಶುಕ್ರವಾರ, ಸೆಪ್ಟೆಂಬರ್ 24, 2021
27 °C

‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ತಪ್ಪೇನಿಲ್ಲ’; ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಇಡುವಂತೆ ಹೇಳಿದ್ದಾರೆ. ಅನ್ನಪೂರ್ಣೇಶ್ವರಿ ಹೆಸರಿಡುವುದು ತಪ್ಪೇನೂ ಇಲ್ಲ. ಇಂದಿರಾ ಗಾಂಧಿ, ಸೇರಿದಂತೆ ನಮ್ಮೆಲ್ಲರಿಗೂ ತಾಯಿ ಅನ್ನಪೂರ್ಣೇಶ್ವರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಸರು ಬದಲಾವಣೆ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಸಹ ಕೈಗೊಂಡಿಲ್ಲ ಎಂದರು.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಿಸಿ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಹೆಸರಿಟ್ಟಿರುವುದಕ್ಕೆ ಈಗಲಾದರೂ ಭಾರತೀಯರಾದ ನಾವು ಸಂತೋಷ ಪಡಬೇಕು. ಧ್ಯಾನಚಂದ್ ಅಪ್ಪಟ ದೇಶಪ್ರೇಮಿ. ಅಂತಹವರ ಹೆಸರು ಇಟ್ಟಿರುವುದು ತಪ್ಪಾಗಿ ಕಾಣಿಸಿದರೆ ಅಂತಹವರು ಕ್ಷಮೆಗೆ ಅರ್ಹರಲ್ಲ ಎಂದು ಹೇಳಿದರು.

ಸಂಭಾವ್ಯ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಈಗಾಗಲೇ ಕ್ರಮವಹಿಸಿದ್ದೇವೆ. ಕೇರಳ, ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಿದ್ದೇವೆ. ರಾಜ್ಯದಲ್ಲಿ ರಾತ್ರಿ 9ರ ನಂತರ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಕೋವಿಡ್ ಪರೀಕ್ಷೆಗಳನ್ನು ಸಹ ಹೆಚ್ಚಿಸಿದ್ದೇವೆ. ಅಂತರರಾಜ್ಯದಿಂದ ರೈಲುಗಳ ಮೂಲಕ ರಾಜ್ಯಕ್ಕೆ ಬರುವವರ ಬಗ್ಗೆ ವಿಶೇಷ ಗಮನವಹಿಸಿದ್ದೇವೆ. ಅವರು ಕಡ್ಡಾಯವಾಗಿ ಸೋಂಕು ಪರೀಕ್ಷೆಯ ವರದಿ ತರಬೇಕು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು