ಚಿಕ್ಕಬಳ್ಳಾಪುರ: ಇಂದಿರಾ ಕಿಟ್ ಸೌಲಭ್ಯ ಮುಂದಿನ ಯುಗಾದಿ ಹಬ್ಬದ ವೇಳೆಗೆ ಜನರಿಗೆ ಸಿಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಟ್ಟರೆ ಒಂದು ಕುಟುಂಬಕ್ಕೆ 30 ರಿಂದ 40 ಕೆ.ಜಿ. ಅಕ್ಕಿ ಮಾಸಿಕ ಸಿಗುತ್ತದೆ. ಅಷ್ಟು ಪ್ರಮಾಣದ ಅಕ್ಕಿಯನ್ನು ಜನರು ಸದುಪಯೋಗಪಡಿಸಿಕೊಳ್ಳುತ್ತಿಲ್ಲ. ದುರ್ಬಳಕೆಗೆ ಅವಕಾಶವಾಗುತ್ತದೆ. ಕೆಲವರು ಅವಶ್ಯಕತೆಗಿಂತ ಹೆಚ್ಚಿಗೆ ಅನ್ನ ಮಾಡಿ ನಾಯಿಗಳಿಗೆ ಅನ್ನ ಹಾಕುವುದನ್ನು ನನ್ನ ಸ್ವಗ್ರಾಮದಲ್ಲೆ ಗಮನಿಸಿದ್ದೇನೆ. ಈ ಬಗ್ಗೆ ದೃಶ್ಯಾವಳಿಗಳನ್ನು ಮಾಡಿಕೊಂಡು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗಮನಕ್ಕೆ ತಂದಿದ್ದೆ ಎಂದರು.

ಇದನ್ನು ಪರಿಗಣಿಸಿದ ಸಮಿತಿಯು ಈ ತಿಂಗಳಿನಿಂದ ಇಂದಿರಾ ಕಿಟ್ ಸೌಲಭ್ಯ ಜನರಿಗೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಯುಗಾದಿಯಿಂದ ಕಿಟ್ ವಿತರಿಸಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಸಮಿತಿ ನಿರ್ಧರಿಸಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಜಿಲ್ಲೆಯಲ್ಲಿ ಈ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಉತ್ತಮ ಪ್ರಗತಿ ಸಾಧಿಸಿದ್ದಾರೆ. ಕೆಲವು ಯೋಜನೆಗಳಲ್ಲಿ ಪ್ರಗತಿ ಸಾಧಿಸಿದ್ದರೂ ಜನರಿಗೆ ಅದು ಅರಿವಿಗೆ ಬಂದಿಲ್ಲ ಎಂದರು.

ಇದಕ್ಕೆ ಉತ್ತಮ ನಿದರ್ಶನ ಎಂದರೆ ಗೃಹಲಕ್ಷ್ಮಿ ಯೋಜನೆಯ ಆರಂಭದಿಂದ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ. ಆದರೆ ಸದರಿ ಬ್ಯಾಂಕಿನಲ್ಲಿ ಆ ಫಲಾನುಭವಿಗಳು ಸಾಲ ಪಡೆದಿರುವುದರಿಂದ ಸದರಿ ಸಾಲಕ್ಕೆ ಹಣವು ಜಮೆ ಆಗಿದೆ. ಇದು ಅವರ ಅರಿವಿಗೆ ಬಾರದೆ ಹಣ ಬಂದಿಲ್ಲ ಎಂದು ಅಪಪ್ರಚಾರ ಮಾಡಿರುವುದು ಕಂಡುಬಂದಿದೆ. ಅಂತಹ ಇನ್ನಿತರ ಪ್ರಕರಣಗಳನ್ನು ಗುರುತಿಸಿ ಫಲಾನುಭವಿಗಳಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಯು ವಂಚಿತ ಆಗಿದ್ದಲ್ಲಿ ಅಂತಹವರನ್ನು ಈ ಯೋಜನೆಗಳ ವ್ಯಾಪ್ತಿಗೆ ತರಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಆದಿರೆಡ್ಡಿ, ರಾಮಕೃಷ್ಣಪ್ಪ, ಸದಸ್ಯ ಜಯರಾಮ್, ನಾರಾಯಣಸ್ವಾಮಿ, ನಿರ್ಮಲಾ ಗಂಗಾಧರ್, ಎಂ.ಕೆ ವೇಣುಗೋಪಾಲ್, ರಾಧಾಕೃಷ್ಣ, ಎಚ್.ಎಂ. ಮುನಿಯಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.