ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | 2,000 ಗಡಿ ದಾಟಿ ಸೋಂಕಿತರು

ಮಂಗಳವಾರ ಒಂದೇ ದಿನ 171 ಪ್ರಕರಣಗಳು ವರದಿ, ಇಬ್ಬರು ಸಾವು
Last Updated 4 ಆಗಸ್ಟ್ 2020, 14:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ 171 ಕೋವಿಡ್‌ 19 ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗಿದ್ದು ಇದೇ ಮೊದಲ ಬಾರಿ.

ಮಂಗಳವಾರ ಚಿಕ್ಕಬಳ್ಳಾಪುರ ತಾಲ್ಲೂಕು ಒಂದರಲ್ಲೇ 144 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ತಾಲ್ಲೂಕುವಾರು ಪ್ರಕರಣಗಳಲ್ಲಿ ಇದೇ ತಾಲ್ಲೂಕು ಮೊದಲ (883 ಪ್ರಕರಣಗಳು) ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಚಿಂತಾಮಣಿ, ಕೊನೆಯ ಸ್ಥಾನದಲ್ಲಿ ಗುಡಿಬಂಡೆ ಇದೆ.

ಜಿಲ್ಲೆಯಲ್ಲಿ ಮಂಗಳವಾರದ ಹೊತ್ತಿಗೆ ಸೋಂಕಿತರ ಸಂಖ್ಯೆ 2,133ಕ್ಕೆ ಏರಿಕೆಯಾಗಿದೆ. ಈವರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ 45,836 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿದ್ದು, ಈ ಪೈಕಿ 43,555 ಮಂದಿ ವರದಿ ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೆ 42 ಜನರು ಮೃತಪಟ್ಟಿದ್ದು, 1,348 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಗೊಂಡಿದ್ದಾರೆ. ಮಂಗಳವಾರ 74 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 743 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT