ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀಳರಿಮೆ ಬದಿಗೊತ್ತಿ, ಗುರಿ ಮುಟ್ಟಿ

ನಗರದಲ್ಲಿ ಅಂಗವಿಕಲರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು
Last Updated 10 ಜನವರಿ 2020, 14:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅಂಗವಿಕಲರು ತಮ್ಮಲ್ಲಿರುವ ಕೀಳರಿಮೆಯನ್ನು ಬದಿಗೊತ್ತಿ ಆತ್ಮವಿಶ್ವಾಸದಿಂದ ಮುನ್ನಡೆದರೆ ಮಾತ್ರ ಸಮಾಜದಲ್ಲಿ ಗುರಿ ತಲುಪಲು ಸಾಧ್ಯ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗೇಶ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂಗವಿಕಲರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಅಂಗವಿಕಲರು ನಮ್ಮಿಂದ ಏನು ಸಾಧನೆ ಮಾಡಲು ಆಗುವುದಿಲ್ಲ ಎಂಬ ಮನೋಭಾವನೆ ಬೆಳೆಸಿಕೊಳ್ಳಬಾರದು. ಜಗತ್ತಿನಲ್ಲಿ ಅಸಾಧ್ಯವಾದ್ದದ್ದು ಯಾವುದು ಇಲ್ಲ. ನಾವು ಅಂಗವಿಕಲರು ಎಂಬ ಕೀಳರಿಮೆ ಬಿಟ್ಟು ಆಸಕ್ತಿಗೆ ಅನುಗುಣವಾಗಿ ವಿವಿಧ ಕ್ಷೇತ್ರದಲ್ಲಿ ಭಾಗವಹಿಸಿ ಸಮಾಜದಲ್ಲಿ ಉತ್ತಮ ಹೆಸರು ಗಳಿಸಬೇಕು’ ಎಂದು ತಿಳಿಸಿದರು.

‘ಭಾರತದಲ್ಲಿ ಅನೇಕ ಮಂದಿ ಅಂಗವಿಕಲರು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಅದ್ಭುತ ಆಟವಾಡಿ ದೇಶಕ್ಕೆ ಒಳ್ಳೆಯ ಹೆಸರು ತಂದಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಇಬ್ಬರು ಅಂಗವಿಕಲ ಕ್ರೀಡಾಪಟುಗಳು ಚಿನ್ನದ ಪದಕ ಪಡೆದಿದ್ದಾರೆ. ಇದು ದೇಶಕ್ಕೆ ಹೆಮ್ಮೆಯ ಸಂಗತಿ. ಅಂಗವಿಕಲರ ಕ್ರೀಡಾಕೂಟಗಳಿಗೆ ಕ್ರೀಡಾ ಇಲಾಖೆ ಅಗತ್ಯ ಸಹಕಾರ, ಬೆಂಬಲ ನೀಡಲಿದೆ’ ಎಂದು ಹೇಳಿದರು.

ಸ್ಪರ್ಧೆಗಳಲ್ಲಿ ಸುಮಾರು 250 ಅಂಗವಿಕಲರು ಭಾಗವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ವಿ.ಜ್ಯೋತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT