ಮಂಗಳವಾರ, ಅಕ್ಟೋಬರ್ 19, 2021
25 °C
ಕಂದಾಯ ಇಲಾಖೆಯಲ್ಲಿ ಸಮಸ್ಯೆ; ಸಚಿವ ಆರ್‌.ಅಶೋಕ್‌ಗೆ ರೈತ ಸಂಘದ ನಿಯೋಗ ಮನವಿ

ಚಿಕ್ಕಬಳ್ಳಾಪುರ: ಭೂ ಮಾಪಕರ ನೇಮಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ, ಚಿಂತಾಮಣಿ ಭೂಮಾಪನ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ರೈತರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದ್ದು ಭೂಮಾಪಕರ ನೇಮಕ ಮಾಡಬೇಕು. ಪೋಡಿ ಮುಕ್ತ ಆಂದೋಲನದಲ್ಲಿ ಕೈಬಿಟ್ಟು ಹೋಗಿರುವ ರೈತರ ಜಮೀನುಗಳನ್ನು ಉಚಿತವಾಗಿ ಪೋಡಿ ಮಾಡಲು ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಸಾಮೂಹಿಕ ನಾಯಕತ್ವ)ದ ಜಿಲ್ಲಾ ಘಟಕದ ಪದಾಧಿಕಾರಿಗಳು ಕಂದಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಐದಾರು ವರ್ಷಗಳಿಂದ ಒಂದೇ ಕಡೆ ಕೆಲವು ಮಾಡುತ್ತಿರುವ ಅಧಿಕಾರಿಗಳು, ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡಬೇಕು. ಪಿ ನಂಬರ್ ಜಮೀನುಗಳನ್ನು ದುರಸ್ತಿ ಮಾಡಿಕೊಡಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭೂಮಾಪನ ಇಲಾಖೆಯಲ್ಲಿ ರೈತರು ಅಳತೆ ಹದ್ದುಬಸ್ತು ಪೋಡಿ ಇ–ಸ್ವತ್ತಿಗಾಗಿ ಅರ್ಜಿಗಳನ್ನು ನೀಡಿದ್ದಾರೆ. ಸುಮಾರು ಎರಡು ವರ್ಷಗಳಿಂದ ಈ ಅರ್ಜಿಗಳು ಬಾಕಿ ಇದ್ದು ಸಕಾಲದಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

20 ವರ್ಷಗಳಿಂದ ಉಳುಮೆ ಮಾಡಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹೊಸದಾಗಿ ಅರ್ಜಿ ಹಾಕಲು ಫಾರಂ ನಂ.53, 57ರ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಸಲ್ಲಿಸಬೇಕು. ಈಗಾಗಲೇ ಮಂಜೂರಾಗಿರುವ ಸಾಗುವಳಿ ಚೀಟಿಗಳನ್ನು ವಿತರಿಸಿ ಖಾತೆ, ಪಹಣಿ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.