ಶನಿವಾರ, ಅಕ್ಟೋಬರ್ 31, 2020
20 °C

ಹದಗೆಟ್ಟ ರಸ್ತೆಗಳ ಡಾಂಬರೀಕರಣಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರಸಭೆಯ ವ್ಯಾಪ್ತಿಯಲ್ಲಿ ತುಂಬಾ ಹದಗೆಟ್ಟಿರುವ ರಸ್ತೆಗಳ ಡಾಂಬರೀಕರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಪದಾಧಿಕಾರಿಗಳು ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ರವಿಕುಮಾರ್, ‘ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟು ಹೋಗಿದ್ದು, ಸಾರ್ವಜನಿಕರು ನಗರದಲ್ಲಿ ಸಂಚರಿಸಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ರಸ್ತೆಗಳಲ್ಲಿ ಗುಂಡಿ ಬಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ನಂದಿ ರಸ್ತೆ, ಗಂಗಮ್ಮ ಗುಡಿ ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದು ಸರಿಯಾಗಿ ಡಾಂಬರೀಕರಣ ಮಾಡದ ಕಾರಣ ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ’ ಎಂದು ತಿಳಿಸಿದರು.

‘ಜಿಲ್ಲಾಧಿಕಾರಿ ಅವರು ನಗರ ಸಂಚಾರ ಕೈಗೊಂಡು ರಸ್ತೆಗಳ ರಿಪೇರಿಗೆ ಕ್ರಮಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.